ಸೂರತ್: ಮೋದಿ ಉಪನಾಮ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲ್ಮನವಿ ಅರ್ಜಿಯ ವಿಚಾರಣೆಗೆ ಗುಜರಾತ್ನ ಸೂರತ್ನ ಸೆಷನ್ಸ್ ಕೋರ್ಟ್ ಸೋಮವಾರ ಸಮ್ಮತಿಸಿದೆ.
ಜತೆಗೆ ರಾಹುಲ್ ಗಾಂಧಿ ಅವರಿಗೆ ನೀಡಲಾಗಿರುವ ಜಾಮೀನನ್ನು ಏಪ್ರಿಲ್ 13ರ ವರೆಗೆ ವಿಸ್ತರಣೆ ಮಾಡಿದೆ. ಏಪ್ರಿಲ್ 13ರಂದು ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸುವುದಾಗಿ ತಿಳಿಸಿದೆ. ಇದೀಗ ರಾಹುಲ್ ಗಾಂಧಿ ಅವರು ಸೂರತ್ ಸೆಷನ್ಸ್ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ರಾಹುಲ್ ಗಾಂಧಿ ಅವರು ಎಲ್ಲ ಕಳ್ಳರ ಸರ್ನೇಮ್ ಮೋದಿ ಅಂತ ಯಾಕಿದೆ? ಎಂದು 2019 ರ ಚುನಾವಣಾ ರ್ಯಾಲಿಯಲ್ಲಿ ಕೇಳಿದ್ದರು. ಮಾರ್ಚ್ 24 ರಂದು ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತು ಮತ್ತು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತು. ಇದಾದ ಬಳಿಕ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲಾಗಿತ್ತು. ಬಳಿಕ ಸರ್ಕಾರಿ ಬಂಗಲೆಯನ್ನು ತೊರೆದರು.