Thursday, March 20, 2025
Homeಟಾಪ್ ನ್ಯೂಸ್ನಾಳೆ ವಯನಾಡ್‌ನಲ್ಲಿ ರಾಹುಲ್ ಗಾಂಧಿ ರೋಡ್ ಶೋ

ನಾಳೆ ವಯನಾಡ್‌ನಲ್ಲಿ ರಾಹುಲ್ ಗಾಂಧಿ ರೋಡ್ ಶೋ

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ ಕ್ಷೇತ್ರ ವಯನಾಡ್‌ನಲ್ಲಿ ನಾಳೆ ರೋಡ್ ಶೋ ನಡೆಸಲಿದ್ದಾರೆ.

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ, ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ವಯನಾಡ್‌ನ ಮೊದಲ ಭೇಟಿ ಇದಾಗಿದ್ದು, ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್ ಭಾರಿ ತಯಾರಿ ನಡೆಸಿದೆ.

ಮೋದಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯವು ಮಾರ್ಚ್ 23ರಂದು 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿತ್ತು. ಇದರ ಬೆನ್ನಲ್ಲೇ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು.

ಸದ್ಯ ಜಾಮೀನಿನ ಮೇಲೆ ಹೊರಗಿರುವ ರಾಹುಲ್, ಸೂರತ್ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸೆಷನ್ಸ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯು ಏಪ್ರಿಲ್ ೧೩ರಂದು ನಡೆಯಲಿದೆ.

ಹೆಚ್ಚಿನ ಸುದ್ದಿ

error: Content is protected !!