ನವದೆಹಲಿ: ಇಂದು ಕಾಂಗ್ರೆಸ್‌ನ ಮೂರನೇ ಪಟ್ಟಿ ಅಂತಿಮವಾಗುವ ಸಾಧ್ಯತೆ ಇದೆ. ಈ ಕುರಿತು ಎಐಸಿಸಿ ಅಧಯ್ಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಇಂದೇ ಅಂತಿಮಗೊಳಿಸುವ ಸೂಚನೆ ಇದ. ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದಾರೆ
ಈಗಾಗಲೇ ಮೊದಲ ಹಂತದಲ್ಲಿ 124 ಅಭ್ಯರ್ಥಿಗಳು ಹಾಗೂ ಎರಡನೇ ಹಂತದಲ್ಲಿ 42 ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಇನ್ನು ಕೇವಲ 58 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಬೇಕಿದೆ.
ಬಿಜೆಪಿ ಇನ್ನೂ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿಸಿಕೊಂಡಿದ್ದು, ಅದಕ್ಕೂ ಮುನ್ನವೇ ಕಾಂಗ್ರೆಸ್ ತನ್ನ ಅಂತಿಮ ಪಟ್ಟಿ ಘೋಷಿಸುವ ಸಾಧ್ಯತೆ ಇದೆ