ನವದೆಹಲಿ : ಹರಿಯಾಣ, ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಹೀನಾಯ ಸೋಲಿನ ನಂತರದಲ್ಲಿ ಇಂಡಿಯಾ ಕೂಟದ ಮಿತ್ರ ಪಕ್ಷ ಟಿಎಂಸಿ ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ನಾವು ಕಾಂಗ್ರೆಸ್ಗೆ ರಬ್ಬರ್ ಸ್ಟ್ಯಾಂಪ್ ಆಗಲ್ಲ ಎಂದು ಹೇಳಿದ್ದು, ಇಂಡಿಯಾ ಕೂಟದಲ್ಲಿ ಬಿರುಕು ಮೂಡಿರುವ ಬಗ್ಗೆ ಚರ್ಚೆ ಗ್ರಾಸವಾಗಿದೆ.
ಇದರ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದ್ದು, ಇಂಡಿಯಾ ಕೂಟದ ಮಿತ್ರ ಪಕ್ಷ ತನ್ನ ಪಾಡಿಗೆ ತಾನೂ ಸ್ಪರ್ಧಿಸಲಿ, ನಾವು ಏಕಾಂಗಿಯಾಗಿ ಸರ್ಧಿಸುತ್ತೇವೆ ಎಂದು ಮುಂಬರುವ ದೆಹಲಿಯ ವಿಧಾನಸಭೆ ಚುನಾವಣೆಯ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದೆ.
ಇದಲ್ಲದೇ ಈ ಚುನಾವಣೆಗೆ ಯಾವ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳಲ್ಲ, ನಾವು ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆ ಎಂದು ದೆಹಲಿಯ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಅವರು ತಿಳಿಸಿದ್ದಾರೆ. ದೆಹಲಿಯ ಒಟ್ಟು 70 ವಿಧಾನಸಭಾ ಸ್ಥಾನಗಳಿಗೆ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಇನ್ನು ಚುನಾವಣೆಯ ನಂತರ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಯಾರೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ತೀರ್ಮಾನಿಸಲಿದೆ ಎಂದು ದೇವೇಂದ್ರ ಹೇಳಿದ್ದಾರೆ.