ಬಹು ನಿರೀಕ್ಷಿತ ಕಾಂಗ್ರೆಸ್ ಪಕ್ಷದ ವಿಧಾನಸಭಾ ಅಭ್ಯರ್ಥಿಗಳ ಮೊದಲ ಪಟ್ಟಿ ಶನಿವಾರ ಮುಂಜಾನೆ ಬಿಡುಗಡೆಯಾಗಿದೆ. 124 ಮಂದಿ ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ.
ಡಿ.ಕೆ.ಶಿವಕುಮಾರ್,ಸಿದ್ದರಾಮಯ್ಯ, ಸತೀಶ್ ಜಾರಕಿ ಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಎಂಬಿ ಪಾಟೀಲ್, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಜಮೀರ್ ಅಹ್ಮದ್, ರಾಮಲಿಂಗಾರೆಡ್ಡಿ, ಕೆ.ಎಚ್. ಮುನಿಯಪ್ಪ ಮುಂತಾದ ಪ್ರಮುಖ ನಾಯಕರು ಸೇರಿದಂತೆ 124 ಮಂದಿ ಅಭ್ಯರ್ಥಿಗಳು ಮೊದಲ ಪಟ್ಟಿಯಲ್ಲೇ ಸ್ಥಾನ ಪಡೆದಿದ್ದಾರೆ. ಬಿಡುಗಡೆಯಾಗಿರುವ ಕ್ಷೇತ್ರಗಳಲ್ಲಿ ಟಿಕೆಟ್ ವಂಚಿತರಿಂದ ಇಂದಿನಿಂದ ವಿರೋಧವೂ ವ್ಯಕ್ತವಾಗುವ ನಿರೀಕ್ಷೆಯಿದೆ. ಉಳಿದ 120 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿಯಿದ್ದು, ಶೀಘ್ರದಲ್ಲೇ ಇತ್ಯರ್ಥವಾಗಲಿದೆ.