Sunday, July 7, 2024
Homeಟಾಪ್ ನ್ಯೂಸ್BREAKING: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಪಿತ್ರೋಡಾ ಮರು ನೇಮಕ

BREAKING: ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಪಿತ್ರೋಡಾ ಮರು ನೇಮಕ

ನವದೆಹಲಿ: ಇತ್ತೀಚೆಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ (Sam Pitroda) ಅವರು ಭಾರತೀಯ ಸಾಗರೋತ್ತರ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ.

ಹಿರಿಯ ನಾಯಕ ಕೆಸಿ ವೇಣುಗೋಪಾಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸ್ಯಾಮ್ ಪಿತ್ರೋಡಾ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರಾಗಿ ಮರುನೇಮಕಗೊಳಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಪಿತ್ರೋಡಾ ವಿವಾದ :
ಪಿತ್ರೋಡಾ ಅವರು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಲವು ವಿವಾದದಿಂದಲೇ ಸುದ್ದಿಯಲ್ಲಿದ್ದರು. ಅಮೆರಿಕದಲ್ಲಿರುವಂತೆ ಪಿತ್ರಾರ್ಜಿತ ಆಸ್ತಿಯ ಮೇಲೆ ತೆರಿಗೆ ಹಾಕುವ ಪದ್ಧತಿಯನ್ನು ಭಾರತದಲ್ಲೂ ಜಾರಿಗೆ ತರಬೇಕು ಎಂದು ಹೇಳಿ ವಿವಾದ ಭುಗಿಲೆಬ್ಬಿಸಿದ್ದ ಸಾಗರೋತ್ತರ ಕಾಂಗ್ರೆಸ್ ಪಕ್ಷದ ನಾಯಕ ಸ್ಯಾಮ್ ಪಿತ್ರೋಡಾ, ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.

ಭಾರತದ ಪೂರ್ವ ಭಾಗದವರು ಚೀನಾದವರಂತೆ ಕಾಣುತ್ತಾರೆ, ದಕ್ಷಿಣ ಭಾರತೀಯರು ಆಫ್ರಿಕರನ್ನರಂತೆ ಕಾಣುತ್ತಾರೆ. ಇನ್ನು, ಭಾರತದ ಪಶ್ಚಿಮ ಭಾಗದವರು ಅರಬ್ಬರಂತೆ ಕಂಡರೆ, ಉತ್ತರ ಭಾರತೀಯರು ಬಿಳಿ ಚರ್ಮವುಳ್ಳವರಾಗಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.

ಹೆಚ್ಚಿನ ಸುದ್ದಿ