ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆ ಸಂಬಂಧ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಿಸಿದ್ದು, ಇವರುಗಳ ವಿರುದ್ಧ ಅವಹೇಳನಕಾರಿ ಕಮೆಂಟ್ ಮಾಡಬಾರದು ಎಂದು ಕೆಪಿಸಿಸಿ ಶಿಸ್ತುಪಾಲನ ಸಮಿತಿ ಎಚ್ಚರಿಕೆ ನೀಡಿದೆ.
ಕರ್ನಾಟಕ ವಿಧಾನ ಸಭಾ ಚುನವಣೆ 2023ರ ಚುನಾವಣೆ ಅಭ್ಯರ್ಥಿಗಳಿಗೆ ಯಾವುದೇ ನಿಂದನೆ ಮಾಡುವಂತಿಲ್ಲ ಎಂದು ಸಮಿತಿಯ ಸಂಚಾಲಕರಾದ ನಿವೇದಿತಾ ಆಳ್ವ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೆಪಿಸಿಸಿ ಶಿಸ್ತುಪಾಲನ ಸಮಿತಿಯು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್, ವಾಟ್ಸಾಪ್, ಇನ್‌ಸ್ಟಾಗ್ರಾಮ್, ಟ್ವಿಟರ್ ಹಾಗೂ ಇನ್ನಿತರ ಮಾಧ್ಯಮಗಳಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ನಾಯಕರು, ಕಾಂಗ್ರೆಸ್ ಪಕ್ಷ, ಪಕ್ಷದ ನಾಯಕರು ಅಥವಾ ಪಕ್ಷ ಘೋಷಿಸಿರುವ ಅಭ್ಯರ್ಥಿಗಳ ವಿರುದ್ಧ ಪೋಸ್ಟ್ ಮಾಡುವುದಾಗಲಿ ಅಥವಾ ಕಮೆಂಟ್ಸ್ ಮಾಡುವುದನ್ನು ಕೆಪಿಸಿಸಿ ಶಿಸ್ತು ಪಾಲನ ಸಮಿತಿಯು ಗಂಭೀರವಾಗಿ ಪರಿಗಣಿಸಲಿದ್ದು, ಅವರುಗಳ ವಿರುದ್ದ ಶಿಸ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.