ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟವಾದ ಬೆನ್ನಲ್ಲೇ ಹಲವು ಕಡೆಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ ಸ್ಫೋಟಗೊಂಡಿದೆ.
ಚಿತ್ರದುರ್ಗದಿಂದ ಕೆ.ಸಿ.ವಿರೇಂದ್ರ ಪಪ್ಪಿಗೆ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಕೋಟೆನಾಡಿನಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಮಾಜಿ ಎಂಎಲ್‌ಸಿ ರಘು ಆಚಾರ್ ಪಕ್ಷದ ನಾಯಕತ್ವದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ, ಕಲಘಟಗಿ ಕ್ಷೇತ್ರದಲ್ಲಿ ಸಂತೋಷ್ ಲಾಡ್‌ಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ನಾಗರಾಜ್ ಛಬ್ಬಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಮಂಜುನಾತ್ ಗೌಡ ಕೂಡಾ ಅಸಮಾಧಾನಗೊಂಡಿದ್ದಾರೆ.