ಬೆಂಗಳೂರು: ಈಗಾಗಲೇ ಎರಡು ಹಂತದಲ್ಲಿ ಕಾಂಗ್ರೆಸ್ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಚುನಾವಣೆಗೆ ತಯಾರಿ ನಡೆಸಿದೆ. ಮೊದಲ ಹಂತದಲ್ಲಿ 124 ಅಭ್ಯರ್ಥಿಗಳನ್ನು, ಎರಡನೇ ಹಂತದಲ್ಲಿ 42 ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಇನ್ನು ಕೇವಲ 58 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಬೇಕಿದೆ.
ಅಂತಿಮ ಪಟ್ಟಿ ಬಿಡುಗಡೆ ಮಾಡಲು ಪಕ್ಷ ಎಲ್ಲಾ ತಯಾರಿ ನಡೆಸಿದ್ದು ಭಾನುವಾರ ರಾತ್ರಿ ಕೂಡಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಮುಖ ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು. ಸಭೆಯ ನಂತರ ಇಂದು ಅಂತಿಮ ಹಂತದ ಮಾತುಕತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರನ್ನು ದೆಹಲಿಗೆ ಬರುವಂತೆ ಸೂಚಿಸಲಾಗಿದೆ. ಇಂದಿನ ಸಭೆಯ ನಂತರ ಕಾಂಗ್ರೆಸ್ ಅಂತಿಮ ಪಟ್ಟಿ ರಿಲೀಸ್ ಮಾಡುವ ಸಾಧ್ಯತೆ ಇದೆ. ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದು ಡಿ.ಕೆ ಶಿವಕುಮಾರ್ ಹೇಳಿದ್ರು ಹೀಗಾಗಿ ಕಾಂಗ್ರೆಸ್ ಅಂತಿಮಪಟ್ಟಿಯಲ್ಲಿ ಯಾರೆಲ್ಲಾ ಅವಕಾಶ ಗಿಟ್ಟಿಸಿದ್ದಾರೆ ಅನ್ನೋ ಕುತೂಹಲವಿದೆ