Wednesday, August 19, 2026
Homeಟಾಪ್ ನ್ಯೂಸ್CONGRESS: ಸಚಿವ ಸ್ಥಾನದಿಂದ ಉತ್ತರ ಕನ್ನಡ ವಂಚಿತ: ಕಾಂಗ್ರೆಸ್ ಯುವ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

CONGRESS: ಸಚಿವ ಸ್ಥಾನದಿಂದ ಉತ್ತರ ಕನ್ನಡ ವಂಚಿತ: ಕಾಂಗ್ರೆಸ್ ಯುವ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ

ಉತ್ತರ ಕನ್ನಡ : ಸಚಿವ ಸಂಪುಟದಲ್ಲಿ (Cabinet expansion) ಉತ್ತರ ಕನ್ನಡ (Uttara kannada) ಜಿಲ್ಲೆಗೆ ಪ್ರಾತಿನಿಧ್ಯ ನೀಡದಿರುವುದನ್ನು ಪ್ರತಿಭಟಿಸಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ (Congress) ಪದಾಧಿಕಾರಿಗಳು ತಮ್ಮ ಸ್ಥಾನಗಳಿಗೆ ಸಾಮೂಹಿಕ ರಾಜೀನಾಮೆ (Mass resignation) ನೀಡಿದ್ದಾರೆ. ಈ ಸಂಬಂಧ ಯುವ ಮೋರ್ಚಾ ಮುಖಂಡರು ಜಿಲ್ಲಾ ಹಾಗೂ ರಾಜ್ಯ ಮಟ್ಟದ ನಾಯಕರಿಗೆ ಅಧಿಕೃತವಾಗಿ ಪತ್ರ ರವಾನಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದರೂ, ಹೈಕಮಾಂಡ್ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸತೀಶ್ ಸೈಲ್, ಮಂಕಾಳು ವೈದ್ಯ ಅಥವಾ ಆರ್.ವಿ. ದೇಶಪಾಂಡೆ ಅವರಲ್ಲಿ ಕನಿಷ್ಠ ಒಬ್ಬರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಭರವಸೆ ಹುಸಿಯಾಗಿದೆ ಎಂದು ಅವರು ದೂರಿದ್ದಾರೆ.

ಇದನ್ನೂ ಓದಿ : ಡಿಕೆಶಿ ಮಂತ್ರಿಮಂಡಲದಲ್ಲಿ ಮಹಿಳಾ ಕೋಟಾ; ರೇಸ್‌ನಲ್ಲಿರುವ 5 ಕಾಂಗ್ರೆಸ್ ನಾಯಕಿಯರು ಇವರೇ…

ಹಲವು ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ನಿಷ್ಠಾವಂತ ಕಾರ್ಯಕರ್ತರ ಭಾವನೆಗಳಿಗೆ ಗೌರವ ಸಿಕ್ಕಿಲ್ಲ ಎಂದು ಆರೋಪಿಸಿರುವ ಯುವ ಕಾಂಗ್ರೆಸ್ ಅಧ್ಯಕ್ಷ ನೂತನ ಜೈನ್, ಉಪಾಧ್ಯಕ್ಷ ದರ್ಶನ್ ನಾಯ್ಕ್ ಸೇರಿದಂತೆ ಹಲವು ಪದಾಧಿಕಾರಿಗಳು ತಮ್ಮ ಹುದ್ದೆಗಳನ್ನು ತ್ಯಜಿಸಿದ್ದಾರೆ.

ಹೆಚ್ಚಿನ ಸುದ್ದಿ

Change Language »
error: Content is protected !!