ಬೆಂಗಳೂರು : ಹುಡುಗಿಯರನ್ನು ಮೆಚ್ಚಿಸುವ ಭರದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಅವಮಾನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಖಾಸಗಿ ವಾಹಿನಿ ಕಾರ್ಯಕ್ರಮವೊಂದರಲ್ಲಿ ಹುಡುಗಿಯನ್ನು ಹೊಗಳುವ ಭರದಲ್ಲಿ ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಅವಹೇಳನಕಾರಿ ಮಾತನಾಡಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಹಿಂದೂ ಕಾರ್ಯಕರ್ತ ಮಹೇಶ್ ಎಂಬುವವರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ದೂರು ಸಲ್ಲಿಸಿದ್ದಾರೆ.
ರಕ್ಷಕ್ ಬುಲೆಟ್ ಹುಡುಗಿಯನ್ನು ಹೊಗಳುವ ಭರದಲ್ಲಿ ಯಡವಟ್ಟು ಮಾಡಿಕೊಂಡಿದ್ದಾರೆ. ಸಹ ಸ್ಪರ್ಧಿಯ ಜತೆ ಮಾತಾಡುವಾಗ ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು ಪ್ಯಾಂಟು ಶರ್ಟು ಹಾಕೊಂಡು ಸ್ವಿಟ್ಟರ್ಲೆಂಡ್‌ನಲ್ಲಿ ಟ್ರಿಪ್ ಹೊಡಿತಿದ್ದಾಳೆ ಅನ್ನಿಸ್ತಿದೆ ಎಂದು ಡೈಲಾಗ್ ಹೊಡೆದಿದ್ದ.
ಇದೀಗ ಈ ಬಗ್ಗೆ ದೂರು ನೀಡಿದ್ದು, ರಕ್ಷಕ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಇನ್ನು ಜಿ ಕನ್ನಡ, ಬಾರ್ಜರಿ ಬ್ಯಾಚುಲರ್ಸ್, ಕಾರ್ಯಕ್ರಮದ ನಿರ್ದೇಶಕರು ಹಾಗೂ ತಂಡದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಪರ ಸಂಘಟನೆಗಳು ಪೊಲೀಸರಿಗೆ ಮನವಿ ಮಾಡಿದ್ದಾರೆ.