ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ್ ಬಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ನಡೆದಿದ್ದು, ಹಿನ್ನೆಲೆಯಲ್ಲಿ ಮುಖ್ಯೋಪಾಧ್ಯಾಯ ಸೇರಿದಂತೆ ಪರೀಕ್ಷಾ ಕೇಂದ್ರದ 15 ಸಿಬ್ಬಂದಿಯನ್ನು ಅಮಾನತು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಅಪರ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆ ಕಲಬುರಗಿ ಎಸ್‌ಪಿ ಇಶಾ ಪಂತ್ ದಿಢೀರನೆ ಭೇಟಿ ನೀಡಿದಾಗ ಕಂಡಿದ್ದಾರೆ.
ಮೈಕ್ರೋ ಜೆರಾಕ್ಸ್ ಮಾಡಿಕೊಂಡು ಪುಸ್ತಕ ಹಿಡಿದು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ನಕಲು ಮಾಡುತ್ತಿದ್ದರು. ಈ ಕಾರಣಕ್ಕೆ ಮುಖ್ಯೋಪಾಧ್ಯಾಯ ಸೇರಿದಂತೆ 15 ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಏಪ್ರಿಲ್ 3ರಂದು ನಡೆದ ಪರೀಕ್ಷೆಯಲ್ಲಿ ನಕಲು ಮಾಡಲು ವಿದ್ಯಾರ್ಥಿಗಳಿಗೆ ಮುಖ್ಯೋಪಾಧ್ಯಾಯ ಹಾಗೂ ಸಿಬ್ಬಂದಿ ಅವಕಾಶ ಮಾಡಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.