Monday, January 20, 2025
Homeದೇಶಕೊರೋನಾ ಉಲ್ಬಣ: ಒಂದೇ ದಿನ 4,435 ಪ್ರಕರಣ ಪತ್ತೆ

ಕೊರೋನಾ ಉಲ್ಬಣ: ಒಂದೇ ದಿನ 4,435 ಪ್ರಕರಣ ಪತ್ತೆ

ನವದೆಹಲಿ: ದೇಶದಲ್ಲಿಮತ್ತೆ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 4,431 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 4,47,33,719ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೊರೋನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,30,916ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 23,091ಕ್ಕೆ ತಲುಪಿದೆ. ಚೇತರಿಸಿಕೊಂಡವರ ಸಂಖ್ಯೆ 4,41,79,712ಕ್ಕೆ ತಲುಪಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಹೆಚ್ಚಿನ ಸುದ್ದಿ

error: Content is protected !!