ಲಂಚ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಮತ್ತೆ ಎರಡು ವಾರಗಳ ಕಾಲ ಕಸ್ಟಡಿಗೆ ಪಡೆದಿದೆ. ಲೋಕಾಯುಕ್ತ ಬಂಧನದ ಅವಧಿ ಶನಿವಾರಕ್ಕೆ ಮುಕ್ತಾಯವಾಗಿತ್ತು. ಹೀಗಾಗಿ ಇಂದು ಅವರನ್ನು ಮತ್ತೆ ಜನಪ್ರತಿನಿಧಿಗಳ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ತನಿಖೆ ಇನ್ನೂ ಬಾಕಿಯಿರುವ ಕಾರಣ ವಿಚಾರಣಾಧೀನ ಬಂಧನದ ಅವಧಿಯನ್ನು ವಿಸ್ತರಿಸಲು ಲೋಕಾಯುಕ್ತ ಮನವಿ ಮಾಡಿತ್ತು.
ಕೆಎಸ್‍ಡಿಐ ಸಂಸ್ಥೆಯಲ್ಲಿ ಟೆಂಡರ್ ನೀಡಲು ಲಂಚ ಪಡೆದ ಆರೋಪದಲ್ಲಿ ಚೆನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್ ಎ1 ಆರೋಪಿಯಾಗಿದ್ದಾರೆ.