ಬೆಂಗಳೂರು: ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ತನಗೆ ಜೈಲೋ ಬೇಲೋ ಅಂತ ಟೆನ್ಷನ್ ನಲ್ಲಿದ್ದಾರೆ. ಇಂದು ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ನಡೆಸಲಿರುವ ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಮೂರ್ತಿ ಕೆ. ನಟರಾಜನ್ ಅವರ ನ್ಯಾಯಪೀಠ ಶಾಸಕರ ಹಣೆಬರಹ ನಿರ್ಧರಿಸಲಿದೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಲಂಚ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ೮ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ರು. ರೇಡ್ ನಡೆದ ದಿನದಿಂದಲೂ ಶಾಸಕ ನಾಪತ್ತೆಯಾಗಿತ್ತು ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಈ ಮಧ್ಯೆ ಸೋಮವಾರ ವಿರೂಪಾಕ್ಷಪ್ಪ ಪರ ವಕೀಲರು ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೆಟ್ಟಿಲೇರಿದ್ರು. ಇಂದು ಅರ್ಜಿ ವಿಚಾರಣೆ ನಡೆಸಲಿರುವ ಕರ್ನಾಟಕ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡುತ್ತದೆಯೇ? ಎಂಬುದು ಕುತೂಹಲ ಮೂಡಿಸಿದೆ.