ರಾಮನಗರ: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಬಾರದು ಈ ಭಾಗದಲ್ಲಿ ಬಿಜೆಪಿ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೀಶ್ವರ್ ಹೇಳಿದ್ದಾರೆ.
ಅಧಿಕಾರಕ್ಕಾಗಿ ಆಪರೇಷನ್ ಕಮಲ ಹಾಗೂ ಬೇರೆ ಪಕ್ಷದವರನ್ನು ಕರೆತರುವ ಪದ್ಧತಿ ತಪ್ಪಬೇಕು ಅಂದರೆ ಹೊಂದಾಣಿಕೆ ನಿಲ್ಲಿಸಬೇಕು. ಇದನ್ನು ನಾನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ಹಾಗಾಗಿ ಈಗಲೂ ಹೊಂದಾಣಿಕೆ ಬೇಡ ಎಂಬ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ನಡೆದ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಯೋಗೀಶ್ವರ್, ಕಳೆದ ಚುನಾವಣೆಯಲ್ಲಿ ಬಿಜೆಪಿ ಕೆಲ ಜೆಡಿಎಸ್ ಅಭ್ಯರ್ಥಿಗಳಿಗೆ ಸಹಕಾರ ನೀಡಿದ್ದು ನಿಜ. ಆದ್ರೆ ನಂತರ ಜೆಡಿಎಸ್‌ನವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಮೈತ್ರಿಗೆ ಮುಂದಾದ್ರು..
ಈ ಬಾರಿಯೂ ಜೆಡಿಎಸ್ ಪಾರ್ಟಿ ರಾಷ್ಟ್ರೀಯ ಪಕ್ಷಗಳೆರಡನ್ನೂ ಬ್ಯಾಲೆನ್ಸ್ ಮಾಡಲು ಮುಂದಾಗಿದೆ ಎಂದ ಸಿ.ಪಿ.ಯೋಗೇಶ್ವರ್ ಈ ಬಾರಿಯ ಚುನಾವಣೆಯಲ್ಲಿ ಹೈಕಮಾಂಡ್‌ಗೆ ಕ್ಲ್ಯಾರಿಟಿ ಇದೆ. ಯಾವುದೇ ರೀತಿಯಲ್ಲೂ ಜೆಡಿಎಸ್ ಜೊತೆ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ್ರು