ಪಾಟ್ನಾ: ಕ್ರಿಕೆಟಿಗ ಇಶಾನ್ ಕಿಶನ್ ಅವರ ತಂದೆ ಪ್ರಣವ್ ಪಾಂಡೆ ಅವರು ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಸೇರ್ಪಡೆಗೊಂಡಿದ್ದಾರೆ.
ಜೆಡಿಯು ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಝಾ ಅವರು ಪ್ರಣವ್ ಪಾಂಡೆ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಜೆಡಿಯು ಸೇರಿದ ಬಳಿಕ ಮಾತನಾಡಿದ ಪಾಂಡೆ, ನಾನು ಪಕ್ಷದ ಸೈನಿಕ. ಪಕ್ಷವನ್ನು ಬಲಪಡಿಸಲು ಸಮರ್ಪಣೆಯೊಂದಿಗೆ ಕೆಲಸ ಮಾಡುತ್ತೇನೆ. ನನಗೆ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಸಂತೋಷದಿಂದ ಸ್ವೀಕರಿಸಲು ಸಿದ್ಧನಿದ್ದೇನೆ ಎಂದರು.
ಈ ವೇಳೆ ಸಂಜಯ್ ಝಾ ಮಾತನಾಡಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಾಯಕತ್ವದ ಮೇಲಿನ ನಂಬಿಕೆಯಿಂದಾಗಿ ಪ್ರಣವ್ ಪಾಂಡೆ ಅವರು ನಮ್ಮ ಪಕ್ಷಕ್ಕೆ ಸೇರುತ್ತಿದ್ದಾರೆ. ಇದು ವಿಶೇಷವಾಗಿ ಮಗಧ ಪ್ರದೇಶದಲ್ಲಿ ಪಕ್ಷಕ್ಕೆ ಹೆಚ್ಚು ಶಕ್ತಿ ನೀಡಲಿದೆ ಎಂದರು.