ರಾಯಚೂರು: ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಬಂದು ಸಿಂಧನೂರಿನಲ್ಲಿ ತಂಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನಿಗೆ (Crime) ಸ್ಥಳೀಯ ನ್ಯಾಯಾಲಯವು (Raichuru) ಮೂರು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
5 ಸಾವಿರ ದಂಡ ವಿಧಿಸಿದ ಕೋರ್ಟ್
ಸಿಂಧನೂರಿನ ಎರಡನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಈ ಶಿಕ್ಷೆ ಪ್ರಕಟಿಸಿದ್ದು, ಆರೋಪಿ ಶೋರನಜಿತ್ ಮಂಡಲ್‌ಗೆ ಮೂರು ವರ್ಷ ಕಠಿಣ ಸಜೆ ವಿಧಿಸುವುದರ ಜೊತೆಗೆ ₹5,000 ದಂಡ ವಿಧಿಸಿದೆ. ದಂಡ ಪಾವತಿಸಲು ವಿಫಲನಾದರೆ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಶಿಕ್ಷೆಗೆ ಒಳಗಾಗಿರುವ ಶೋರನಜಿತ್ ಮಂಡಲ್ ಕಳೆದ 12 ವರ್ಷಗಳಿಂದ ಸಿಂಧನೂರು ತಾಲೂಕಿನ ಆರ್‌ಎಚ್ ಕ್ಯಾಂಪ್ ಸಂಖ್ಯೆ 3 ರಲ್ಲಿ ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ನೆಲೆಸಿದ್ದ. ಬಾಂಗ್ಲಾ ನಿರಾಶ್ರಿತರು ಹೆಚ್ಚಾಗಿ ವಾಸಿಸುವ ಈ ಕ್ಯಾಂಪ್‌ನಲ್ಲಿ ಯಾರಿಗೂ ತಿಳಿಯದಂತೆ ಆಶ್ರಯ ಪಡೆದಿದ್ದ ಈತ, ಇಲ್ಲಿನ ಕೆಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ 2018 ರಲ್ಲಿ ಭಾರತೀಯ ಪಾಸ್‌ಪೋರ್ಟ್ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದ. ಆದರೆ, ತಾಯ್ನಾಡಾದ ಬಾಂಗ್ಲಾದೇಶದಲ್ಲಿರುವ ತನ್ನ ಹೆತ್ತವರನ್ನು ನೋಡಲು ಭಾರತೀಯ ಪಾಸ್‌ಪೋರ್ಟ್ ಬಳಸಿಕೊಂಡು ವಾಪಸ್ ತೆರಳಲು ಯತ್ನಿಸುತ್ತಿದ್ದಾಗ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
ವಿಮಾನ ನಿಲ್ದಾಣದ ಮುಖ್ಯ ಇಮಿಗ್ರೇಷನ್ ಅಧಿಕಾರಿಗಳು ಈತನ ಪಾಸ್‌ಪೋರ್ಟ್ ಹಾಗೂ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಈತ ಭಾರತೀಯ ಪ್ರಜೆಯಲ್ಲ ಬದಲಿಗೆ ಬಾಂಗ್ಲಾದೇಶದಿಂದ ಅಕ್ರಮವಾಗಿ ನುಸುಳಿ ಬಂದಿರುವ ವ್ಯಕ್ತಿ ಎಂಬ ಆಘಾತಕಾರಿ ಸತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಆತನ ಭಾರತೀಯ ಪಾಸ್‌ಪೋರ್ಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಸಂಬಂಧ 2018 ರಲ್ಲಿಯೇ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾನೂನುಬಾಹಿರ ನುಸುಳುವಿಕೆ ಕಾಯ್ದೆಯಡಿ ದೂರು ದಾಖಲಾಗಿತ್ತು. ಸುದೀರ್ಘ ತನಿಖೆ ನಡೆದು ಸಾಕ್ಷ್ಯಾಧಾರಗಳು ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಈಗ ಶಿಕ್ಷೆ ಪ್ರಕಟಿಸಿದ್ದು, ಶಿಕ್ಷೆಯ ಅವಧಿ ಮುಗಿದ ಬಳಿಕ ನಿಯಮಾನುಸಾರ ಆರೋಪಿಯನ್ನು ಸ್ವದೇಶಕ್ಕೆ (ಬಾಂಗ್ಲಾದೇಶ) ಹಸ್ತಾಂತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ.
ಕಾಮಗಾರಿ ಸ್ಥಳದಲ್ಲಿ ಅಕ್ರಮ ಸ್ಫೋಟಕ ಬಳಕೆ!- ಇಬ್ಬರು ಅರೆಸ್ಟ್
ಬೆಂಗಳೂರು: ಬೆಂಗಳೂರಿನ (Bengaluru) ಭೋಗನಹಳ್ಳಿಯ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕಾನೂನುಬಾಹಿರವಾಗಿ ಸ್ಫೋಟಕಗಳನ್ನು (Explosives) ಸಂಗ್ರಹಿಸಿ, ಬಳಸಿದ (Crime) ಆರೋಪದ ಮೇಲೆ ಬೆಳ್ಳಂದೂರು ಪೊಲೀಸರು ಇಬ್ಬರನ್ನು (Arrest) ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆವಲಪರ್ ಹಾಗೂ ಸೈಟ್ ಎಂಜಿನಿಯರ್ ಸೇರಿದಂತೆ ಒಟ್ಟು ಐದು ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಬಂಧಿತರನ್ನು ಸುರಕ್ಷತಾ ಮೇಲ್ವಿಚಾರಕ ಅರುಣ್ ಕುಮಾರ್ ಮತ್ತು ಸೈಟ್ ಇನ್‌ಚಾರ್ಜ್ ಜಗನ್ ಎಂದು ಗುರುತಿಸಲಾಗಿದೆ. ಇವರ ಜೊತೆಗೆ ಸೈಟ್ ಎಂಜಿನಿಯರ್ ಪ್ರಭಾಕರ್, ಆದರ್ಶ ಡೆವಲಪರ್ಸ್ ಮಾಲೀಕರು ಹಾಗೂ ಮತ್ತೊಬ್ಬ ಗುತ್ತಿಗೆದಾರನ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ದುರಂತದಲ್ಲಿ ನಿಜವಾದ ಅಪರಾಧಿಗಳು ಯಾರು? ಅಶೋಕ್ ಪ್ರಶ್ನೆ