ಚಾಮರಾಜನಗರ : ಚಾಮರಾಜನಗರ ( chamarajanagar ) ದಲ್ಲಿ ಭೀಕರ ದುರಂತ ನಡೆದಿದ್ದು, ಗಾಂಜಾ ನಶೆಯಲ್ಲಿ (Illegal substance ) ವ್ಯಕ್ತಿಯ ಹತ್ಯೆಯಾಗಿದೆ.
ಸ್ನೇಹಿತನ ಜೊತೆ ಎಣ್ಣೆ ಪಾರ್ಟಿಗೆ ಹೋದಾಗ ಯುವಕನ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ದೊಡ್ಡಕೆರೆ ಬಳಿ ಕೊಲೆ ನಡೆದಿದೆ.
ಕತ್ತು ಸೀಳಿದ ಸ್ಥಿತಿಯಲ್ಲಿ ನಂಜುಂಡಸ್ವಾಮಿ (22) ಎಂಬಾತನ ಯುವಕನ ಶವ ಪತ್ತೆಯಾಗಿದೆ. ನಿನ್ನೆ ಸಂಜೆ ಸ್ನೇಹಿತನ ಜೊತೆಗೆ ನಂಜುಂಡಸ್ವಾಮಿ ಎಣ್ಣೆ ಪಾರ್ಟಿಗೆ ತೆರಳಿದ್ದಾನೆ ಗಾಂಜಾ ಮತ್ತಿನಲ್ಲಿ ಕೊಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಶೆಯಲ್ಲಿ ಸ್ನೇಹಿತರ ನಡುವೆ ಗಲಾಟೆ ಆಗಿದೆ.
ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಸದ್ಯ ಓರ್ವವನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸದ್ಯ ಘಟನೆ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಜೈಶಂಕರ್ ಸಂಧಾನದ ಫಲಶೃತಿ -ಭಾರತದ ಹಡಗುಗಳಿಗೆ ಹಾರ್ಮುಜ್ ದಾಟಲು ಅನುಮತಿ!