ಕೇರಳ : 2008ರಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ (Crime) ಪ್ರಕರಣದಲ್ಲಿ ತಲಕ್ಕೇರಿ ಸೆಷನ್ಸ್ ನ್ಯಾಯಾಲಯವು ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದ್ದು, ಏಳು ಆರ್‌ಎಸ್‌ಎಸ್ (RSS) ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
ನ್ಯಾಯಾಲಯವು ವಿಮಲ್ ಜೆ. ಸುಮಿತ್ ಅಲಿಯಾಸ್ ಕುಟ್ಟನ್, ಕೆ.ಕೆ. ಪ್ರಜೇಶ್ ಬಾಬು, ಬಿ. ನಿಧಿನ್, ಕೆ. ಸನಲ್, ಸ್ಮಿಜೋಶ್, ಸಜೀಶ್ ಮತ್ತು ವಿ. ಜಯೇಶ್ ಅವರನ್ನು ತಪ್ಪಿತಸ್ಥರು ಎಂದು ಘೋಷಿಸಿದೆ. ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದರು. ಜೊತೆಗೆ ಪ್ರತಿಯೊಬ್ಬರಿಗೂ ₹1.40 ಲಕ್ಷ ದಂಡ ವಿಧಿಸಲಾಯಿತು
ಇದೇ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಸಂತೋಷ್ ಕುಮಾರ್, ಬಿ. ಶರತ್, ಇ.ಕೆ. ಸನೀಶ್ ಹಾಗೂ ಕುನ್ನುಂಪ್ರತ್ ಅಜೇಶ್ ಅವರನ್ನು ಸಾಕ್ಷ್ಯಾಭಾವದ ಹಿನ್ನೆಲೆಯಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿದೆ. ಎಂಟನೇ ಆರೋಪಿ ಕೆ. ಅಜಿತ್ ವಿಚಾರಣೆಯ ಸಮಯದಲ್ಲೇ ಮೃತಪಟ್ಟಿದ್ದರು.
ಪ್ರಕರಣದ ಹಿನ್ನೆಲೆ
2008ರ ಡಿಸೆಂಬರ್ 31ರಂದು ಕಣ್ಣೂರು ಜಿಲ್ಲೆಯ ತಲಕ್ಕೇರಿ ಸಮೀಪದ ಥಲೈ ಪ್ರದೇಶದಲ್ಲಿ ಸಿಪಿಐ(ಎಂ) ಕಾರ್ಯಕರ್ತ ಲತೀಶ್ ಅವರನ್ನು ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲೇ ಹತ್ಯೆ ಮಾಡಲಾಗಿತ್ತು. ದಾಳಿಯ ವೇಳೆ ಲತೀಶ್ ಅವರ ಸ್ನೇಹಿತನೂ ಗಂಭೀರವಾಗಿ ಗಾಯಗೊಂಡಿದ್ದನು.
ಈ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಗಲಭೆ, ಕ್ರಿಮಿನಲ್ ಬೆದರಿಕೆ, ಪಿತೂರಿ, ಕೊಲೆ, ಕೊಲೆ ಯತ್ನ ಸೇರಿದಂತೆ ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸುದೀರ್ಘ ವಿಚಾರಣೆಯ ನಂತರ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕೈದಿಗಳಿಗೆ ರಾಜ್ಯ ಸರ್ಕಾರದಿಂದ ಬಿಡುಗಡೆ ಭಾಗ್ಯ
ಮುಖ್ಯಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಗಳಿಗೆ ರಾಜ್ಯ ಸರ್ಕಾರ (Karnataka Government) ಸಿಹಿ ಸುದ್ದಿಯನ್ನು ನೀಡಿದೆ.
ಹೌದು, 33 ಕೈದಿಗಳಿಗೆ ಸಚಿವ ಸಂಪುಟ ಸಭೆಯು ಬಿಡುಗಡೆಯ ಭಾಗ್ಯವನ್ನು ಕರುಣಿಸಿದೆ. ಸನ್ನಡತೆಯ ಆಧಾರದ ಮೇಲೆ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿರುವ ಕೈದಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಪುಟ ಸಭೆ ಅಸ್ತು ಎಂದಿದೆ.
ಅಲ್ಲದೇ ಗೃಹಲಕ್ಷ್ಮಿ ಸಹಕಾರ ಸಂಘ ಸ್ಥಾಪನೆಗೆ, ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಣೆಗೂ ಸಂಪುಟ ಸಭೆ ಅನುಮೋದನೆ ನೀಡಿದೆ. ಇನ್ನು ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಆರೋಪ ಪ್ರಕರಣದ ಕುರಿತೂ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯುತ್ತಿದೆ.
ಇದನ್ನೂ ಓದಿ: ರಾಜ್ಯದ ಆಸ್ತಿ ಮಾಲೀಕರಿಗೆ ಗುಡ್‌ನ್ಯೂಸ್- ʼಎ-ಖಾತಾ’ ನೀಡಲು ಅನುಮೋದನೆ