ಚಿಕ್ಕಬಳ್ಳಾಪುರ : 45 ವಯಸ್ಸಿನ ವ್ಯಕ್ತಿಯೊಂದಿಗೆ ಅಪ್ರಾಪ್ತೆಯನ್ನು ಮದುವೆ ಮಾಡಿಸಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಬೆಳಕಿಗೆ ಬಂದಿದೆ.
ಬಾಲಕಿಯ ತಾಯಿ ವಿರೋಧಿಸಿದರೂ ಆಕೆಯ ತಂದೆಯೇ ಬಲವಂತವಾಗಿ ವಿವಾಹ ಮಾಡಿಸಿದ್ದಾನೆಂಬ ಆರೋಪ ಕೇಳಿ ಬಂದಿದೆ. ಮದುವೆ ಫೋಟೋ ಹರಿದಾಡುತ್ತಿದ್ದು, ಮದುವೆ ಮಾಡಿಸಬೇಡಿ ಎಂದು ವಿರೋಧಿಸಿದ್ದ ಬಾಲಕಿ ತಾಯಿಗೆ ಬೆದರಿಕೆ ಹಾಕಲಾಗಿದೆ ಎಂಬ ಆಪಾದನೆಯೂ ಇದೆ. ಘಟನೆ ಸಂಬಂಧ ಚಿಕ್ಕಬಳ್ಳಾಪುರ ಪೊಲೀಸರು ಪ್ರಕರಣದ ದಾಖಲಿಸಿಕೊಂಡು ತನಿಖೆಕೈಗೊಂಡಿದ್ದಾರೆ.
ಇನ್ನು ನಿನ್ನೆಯಷ್ಟೇ ರೂ.50 ಸಾವಿರ ಸಾಲವನ್ನು ವಾಪಸ್ ಕೊಡಲಿಲ್ಲ ಎಂಬ ಕಾರಣಕ್ಕೆ ಕುಟುಂಬವೊಂದರ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ವಿವಾಹವಾಗಿರುವಂತಹ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯ ಗ್ರಾಮವೊಂದರಲ್ಲಿ ಬೆಳಕಿಗೆ ಬಂದಿತ್ತು.
ಘಟನೆಯ ಬಗ್ಗೆ ಸಂತ್ರಸ್ತ ಬಾಲಕಿ ದೂರು ನೀಡಿದ ಆಧಾರದ ಮೇಲೆ ವಿಶಾಲ್ ಪುಂಡಲೀಕ ಡವಳಿ (22) ಹಾಗೂ ಯುವಕನ ತಾಯಿ ರೇಖಾ ಪುಂಡಲೀಕ ಡವಳಿ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.