Thursday, April 16, 2026
Homeಕ್ರೈಂCRIME: ಚೀನಾ ಸಂಪರ್ಕ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರು ಅರೆಸ್ಟ್‌

CRIME: ಚೀನಾ ಸಂಪರ್ಕ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರು ಅರೆಸ್ಟ್‌

ಬೆಂಗಳೂರು: ಮ್ಯೂಲ್ ಅಕೌಂಟ್‌ಗಳ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಚೀನಾ ಸಂಪರ್ಕ ಹೊಂದಿದ್ದ ಮಂಗಳೂರಿನ ಇಬ್ಬರು ಸೈಬರ್ ವಂಚಕರನ್ನು (crime) ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ.

ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಬಂಧಿತರಾಗಿದ್ದಾರೆ. ಡಿಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ನಡೆದಿದೆ.

ಬಂಧಿತರು ಟ್ರೇಡಿಂಗ್ ಬಿಸಿನೆಸ್ ಹೆಸರಿನಲ್ಲಿ ಬ್ಯಾಂಕ್ ಖಾತೆಗಳ ವಿವರಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಆ ಖಾತೆಗಳನ್ನು ಸೈಬರ್ ವಂಚನೆಗೆ ಬಳಸಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರೋಪಿಗಳಿಂದ ನಾಲ್ಕು ಮೊಬೈಲ್ ಫೋನ್‌ಗಳು, 18 ಎಟಿಎಂ/ಬಿಟ್ ಕಾರ್ಡ್‌ಗಳು, 17 ಬ್ಯಾಂಕ್ ಪಾಸ್‌ಬುಕ್‌ಗಳು, ಆರು ಚೆಕ್ ಪುಸ್ತಕಗಳು, 1,479.31 ಯುಎಸ್‌ಡಿಟಿ (ಕ್ರಿಪ್ಟೋಕರೆನ್ಸಿ) ಹಾಗೂ ಒಂದು ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

 ದಂಧೆ ಹೇಗೆ ನಡೆಯುತ್ತಿತ್ತು?
ತನಿಖೆಯ ವೇಳೆ ಈ ಮ್ಯೂಲ್ ಅಕೌಂಟ್ ದಂಧೆ ವ್ಯವಸ್ಥಿತವಾಗಿ ನಡೆಯುತ್ತಿದ್ದುದಾಗಿ ಬಹಿರಂಗವಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತರು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿಸುತ್ತಿದ್ದರು. ನಂತರ ವಾಟ್ಸ್‌ಪ್‌ ಮತ್ತು ಟೆಲಿಗ್ರಾಮ್‌ ಮೂಲಕ ಚೀನಾದ ವಂಚಕರೊಂದಿಗೆ ಸಂಪರ್ಕ ಸಾಧಿಸಿ, ಅದೇ ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಅವರಿಗೆ ಮಾರಾಟ ಮಾಡುತ್ತಿದ್ದರು.

ಕ್ರಿಪ್ಟೊ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ಪಡೆದುಕೊಳ್ಳುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ, ಅವುಗಳನ್ನು ಚೀನಾದ ಸೈಬರ್ ವಂಚಕರಿಗೆ ಒದಗಿಸುತ್ತಿದ್ದರು.

ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಈ ಜಾಲದ ಮೂಲಕ ಸಂಗ್ರಹಿಸಿ ಚೀನಾದವರಿಗೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಚೀನಾದ ವಂಚಕರು ಆ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಈ ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಈ ಖಾತೆಗಳ ಮೂಲಕ ನಡೆದ ಹಣಕಾಸು ವ್ಯವಹಾರಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.

ಇದನ್ನೂ ಓದಿ : ಭಾರತಕ್ಕೆ ಬರುತ್ತಿದ್ದ ಸರಕು ಹಡಗು ಮೇಲೆ ಹಾರ್ಮುಜ್ ಜಲಸಂಧಿಯಲ್ಲಿ ದಾಳಿ : ಥಾಯ್ ನೌಕಾಪಡೆ ಮಾಹಿತಿ

ಹೆಚ್ಚಿನ ಸುದ್ದಿ

Change Language »
error: Content is protected !!