ಬೆಂಗಳೂರು : ಮಧ್ಯಪ್ರಾಚ್ಯ (Middle East) ರಾಷ್ಟ್ರಗಳಲ್ಲಿ ನಡೀತಿರೋ ಯುದ್ಧದ (War ) ಎಫೆಕ್ಟ್ ಭಾರತದ ಮೇಲೂ ತಟ್ಟಿದ್ದು, ಈಗಾಗಲೇ LPG ಕೊರತೆ ದೊಡ್ಡ ಹೊಡೆತವನ್ನೇ ಕೊಟ್ಟಿದೆ.
ಭಾರತದಲ್ಲಿ ಗ್ಯಾಸ್ ಬಿಕ್ಕಟ್ಟಿಗೆ ಉದ್ಭಬಿಸಿದ್ದು, ಈ ಬೆಳವಣಿಗೆಯಿಂದಾಗಿ ವಾಣಿಜ್ಯ (Commercial) ಸಿಲಿಂಡರ್‌ಗಳ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ.
ಸಿಲಿಂಡರ್ ಅಭಾವವನ್ನೇ ಬಂಡವಾಳ ಮಾಡಿಕೊಂಡಿರೋ ಕೆಲವರು ಕಾಳಸಂತೆಯಲ್ಲಿ ಸಿಲಿಂಡರ್ ಮಾರಾಟಕ್ಕೆ ಇಳಿದಿದ್ದಾರೆ.ಕಾಳಸಂತೆಯಲ್ಲಿ ಒಂದೊಂದು ಸಿಲಿಂಡರ್ ಬೆಲೆ ₹3,000 ರಿಂದ ₹4,000 ವರೆಗೆ ಏರಿಕೆಯಾಗಿದೆ ಎಂದು ವರದಿಯಾಗಿದೆ.
ಸುಮಾರು 70 ದಿನಗಳವರೆಗೆ ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗುವುದಿಲ್ಲ ಎಂದು ತೈಲ ಕಂಪನಿಗಳು ಭರವಸೆ ನೀಡಿದ್ದವು. ಆದರೆ ಈಗ ದಿಢೀರ್ ಸರಬರಾಜು ಸ್ಥಗಿತಗೊಂಡಿರುವುದರಿಂದ ದೇಶದಾದ್ಯoತ ಹೋಟೆಲ್ ಗಳು ಬಂದ್ ಆಗುವ ಸಾಧ್ಯತೆ ಇದೆ.
ಇನ್ನೂ, ಸಿಲಿಂಡರ್ ಅಭಾವ ಒಂದೆಡೆಯಾದರೆ ಮತ್ತೊಂದೆಡೆ ಬೆಲೆ ಏರಿಕೆ ಬಿಸಿ ಸಹತಟ್ಟಿದೆ. ತೈಲ ಬೆಲೆ ಏರಿಕೆ ಮತ್ತು ಕೊರತೆಯಿಂದಾಗಿ ರಾಜ್ಯದಲ್ಲಿ ಆಹಾರ ಪದಾರ್ಥಗಳ ಬೆಲೆ ಕೂಡ ಶೇ. 10 ರಿಂದ 20 ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಬುರ್ಖಾ ಧರಿಸಿ ಮದುವೆ ಮನೆಗಳಲ್ಲಿ ಲೂಟಿ – ಖತರ್ನಾಕ್ ಕಳ್ಳಿ ಅಂದರ್!