ಬೆಂಗಳೂರು : ನಗರದ (Bengaluru) ಅರಮನೆ ಮೈದಾನದಲ್ಲಿ (Palace ground) ಆಯೋಜಿಸಲಾಗಿದ್ದ ವಿಶೇಷ ಸಮಾರಂಭದಲ್ಲಿ ಮಾಜಿ ಸಂಸದರಾದ ಎಲ್. ಆರ್. ಶಿವರಾಮೇಗೌಡ ಅವರಿಗೆ ಅರ್ಪಿಸಲಾದ “ಶಿವಪಥ” ಎಂಬ ಅಭಿನಂದನಾ ಕೃತಿಯನ್ನು ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ (DK Shivakumar) ಅವರು ಅಧಿಕೃತವಾಗಿ ಅನಾವರಣಗೊಳಿಸಿದರು. ರಾಜಕೀಯ ಮತ್ತು ಸಾಮಾಜಿಕ ವಲಯದ ಪ್ರಮುಖ ಗಣ್ಯರ ಸಮ್ಮುಖದಲ್ಲಿ ಈ ಪುಸ್ತಕ ಬಿಡುಗಡೆ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಈ ಕಾರ್ಯಕ್ರಮಕ್ಕೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಮುಖಂಡರು ಸಾಕ್ಷಿಯಾದರು. ಸ್ಪಟಿಕಪುರಿ ಸಂಸ್ಥಾನದ ಶ್ರೀ ನಂಜಾವಧೂತ ಸ್ವಾಮೀಜಿಗಳು, ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗಳು ಹಾಗೂ ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೌಮ್ಯನಾಥ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ಈ ಸಮಾರಂಭವು ಜರುಗಿತು. ಇವರೊಂದಿಗೆ ನಾಡಿನ ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಮತ್ತು ನ್ಯಾಯಮೂರ್ತಿ ಚಂದ್ರಶೇಖರಯ್ಯ ಅವರು ಉಪಸ್ಥಿತರಿದ್ದು ಕಾರ್ಯಕ್ರಮದ ಕಳೆಯನ್ನು ಹೆಚ್ಚಿಸಿದರು.
ಇದನ್ನೂ ಓದಿ : ಕನಿಷ್ಠ ವೇತನ ಅಂತಿಮ ಅಧಿಸೂಚನೆ ಮರುಪರಿಶೀಲನೆ ಬೇಡ ಎಂದ ಟ್ರೇಡ್ ಯೂನಿಯನ್, ಸಿಎಂಗೆ ವಿಶೇಷ ಮನವಿ
ರಾಜಕೀಯ ರಂಗದ ಪ್ರಮುಖರಾದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ರಾಮಲಿಂಗಾರೆಡ್ಡಿ ಹಾಗೂ ಮಾಜಿ ಸಚಿವ ಸುಧಾಕರ್ ಅವರು ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಇವರ ಜೊತೆಗೆ ಶಾಸಕರುಗಳಾದ ರಂಗನಾಥ್ ಮತ್ತು ರಿಜ್ವಾನ್ ಅರ್ಷದ್ ಹಾಗೂ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಜಿ ಸಂಸದರಿಗೆ ತಮ್ಮ ಗೌರವಪೂರ್ವಕ ಶುಭ ಹಾರೈಕೆಗಳನ್ನು ಸಲ್ಲಿಸಿದರು.