ದೈವಾರಾಧನೆ ನಡೆಯುತ್ತಿದ್ದ ಸ್ಥಳದಲ್ಲಿ ದೈವ ನರ್ತನ ಮಾಡುತ್ತಿರುವಾಗಲೇ ದೈವ ನರ್ತಕರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕರಾವಳಿಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಮೂಲಂಗೀರಿ ನಿವಾಸಿ ಕಾಂತು ಅಜಿಲ ಮೃತಪಟ್ಟ ದೈವ ನರ್ತಕ.
ಅವರು ಎಡಮಂಗಲ ಗ್ರಾಮದ ಕೂಡುಕಟ್ಟಿಗೆ ಸಂಬಂಧಿಸಿದಂತೆ ಹಲವಾರು ವರ್ಷಗಳಿಂದ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ನಸುಕಿನ ಜಾವ ದೋಳ್ಪಾಡಿ ಗ್ರಾಮದ ಇಡ್ಯಡ್ಕದಲ್ಲಿ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದರು.
ನೇಮೋತ್ಸವದಲ್ಲಿ ಎರಡು ದೈವನರ್ತಕರು ದೈವನರ್ತನದಲ್ಲಿ ತೊಡಗಿದ್ದರು. ಕುಣಿದು ಕುಣಿದು ಕೊನೆಗೆ ಕಾಂತು ಅಜಿಲ ಅವರು ಕುಸಿದುಬಿದ್ದಿದ್ದಾರೆ. ಈ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.