ಮೈಸೂರು/ಬಳ್ಳಾರಿ : ರೇಣುಕಾಸ್ವಾಮಿಯ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಇಂದು ಮಧ್ಯಂತರ ಜಾಮೀನಿನ ಮೇಲೆ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದು, ಬೆಂಗಳೂರಿನತ್ತ ಹೊರಟಿದ್ದಾರೆ.
ತಮ್ಮ ನೆಚ್ಚಿನ ನಟ ಜೈಲಿನಿಂದ ಬಿಡುಗಡೆಯಾಗಿದ್ದಕ್ಕೆ ದರ್ಶನ್ ಅಭಿಮಾನಿಗಳು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿ, ದರ್ಶನ್ ಭಾವಚಿತ್ರ ಪ್ರದರ್ಶನ ಮಾಡಿ ಸಂಭ್ರಮಪಟ್ಟರು.
ದರ್ಶನ್ಗೆ ತೀವ್ರ ಬೆನ್ನುಹುರಿ ಸಮಸ್ಯೆ ಕಾಡುತ್ತಿದ್ದು, ಅಗತ್ಯ ಚಿಕಿತ್ಸೆಗಾಗಿ ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿ, 6 ವಾರಗಳ ಷರತ್ತುಬದ್ಧ ಜಾಮೀನನ್ನು ಮಂಜೂರು ಮಾಡಿದೆ.