Sunday, July 7, 2024
Homeಕ್ರೀಡೆDAVID WARNER : ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದ ಆಸೀಸ್ ನ ದಿಗ್ಗಜ 

DAVID WARNER : ಕ್ರಿಕೆಟ್ ಲೋಕಕ್ಕೆ ಗುಡ್ ಬೈ ಹೇಳಿದ ಆಸೀಸ್ ನ ದಿಗ್ಗಜ 

ಟಿ20 ವಿಶ್ವಕಪ್ ಟೂರ್ನಿಯಿಂದ ಆಸ್ಟ್ರೇಲಿಯಾ ಹೊರಬಿದ್ದ ಬೆನ್ನಲ್ಲೇ ದಿಗ್ಗಜ ಬ್ಯಾಟರ್ ಡೇವಿಡ್ ವಾರ್ನರ್ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 

ಈ ಬಾರಿಯ ಟಿ20 ವಿಶ್ವಕಪ್​ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು. ಅಲ್ಲದೆ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಚುಟುಕು ಕ್ರಿಕೆಟ್ ಕೆರಿಯರ್ ಅಂತ್ಯಗೊಳಿಸಲು ನಿರ್ಧರಿಸಿದ್ದರು. 

ಆದರೆ ಸೂಪರ್-8 ಸುತ್ತಿನ ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ದ ಆಸ್ಟ್ರೇಲಿಯಾ 24 ರನ್​ಗಳಿಂದ ಸೋಲನುಭವಿಸಿತ್ತು. ಈ ಸೋಲಿನೊಂದಿಗೆ ವಾರ್ನರ್ ತಮ್ಮ ಟಿ20 ಕೆರಿಯರ್ ಅಂತ್ಯಗೊಳಿಸಿದ್ದಾರೆ.

ಇದಕ್ಕೂ ಮುನ್ನ ಜನವರಿ 1, 2024 ರಂದು ಡೇವಿಡ್ ವಾರ್ನರ್ ಏಕದಿನ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದರು. ಇದೀಗ ಟಿ20 ವಿಶ್ವಕಪ್​ ಮೂಲಕ ಚುಟುಕು ಕ್ರಿಕೆಟ್​ಗೂ ನಿವೃತ್ತಿ ಘೋಷಿಸಿದ್ದಾರೆ.

ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 2300 ಎಸೆತಗಳನ್ನು ಎದುರಿಸಿ 3277 ರನ್ ಕಲೆಹಾಕಿದ್ದಾರೆ. ಈ ವೇಳೆ ಒಂದು ಭರ್ಜರಿ ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ.

2025ರ ಚಾಂಪಿಯನ್ಸ್ ಟ್ರೋಫಿಗೆ, ಆಸ್ಟ್ರೇಲಿಯಾ ತಂಡ ಬಯಸಿದಲ್ಲಿ ಆಡಲು ಲಭ್ಯರಿರುವುದಾಗಿ ದಿಗ್ಗಜ ಡೇವಿಡ್ ವಾರ್ನರ್ ಹೇಳಿದ್ದಾರೆ. 

ಹೆಚ್ಚಿನ ಸುದ್ದಿ