Sunday, January 25, 2026
Homeಟಾಪ್ ನ್ಯೂಸ್CONGRESS: ಚಿಕ್ಕಮಗಳೂರು ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ- ಪಕ್ಷಕ್ಕೆ ಡಿಕೆಶಿ ಆಪ್ತ ಗುಡ್‌ ಬೈ

CONGRESS: ಚಿಕ್ಕಮಗಳೂರು ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ- ಪಕ್ಷಕ್ಕೆ ಡಿಕೆಶಿ ಆಪ್ತ ಗುಡ್‌ ಬೈ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು (Chikkamagaluru) ಕಾಂಗ್ರೆಸ್‍ನಲ್ಲಿ (Congress) ಭಿನ್ನಮತದ ಹೊಗೆ ಕಾಣಿಸಿಕೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಎಂ.ಎಲ್ ಮೂರ್ತಿ (ML Murthy) ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ.

ಹಾಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಎಂ.ಎಲ್ ಮೂರ್ತಿಯವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಹಿಂದೆ ಜಿಲ್ಲಾ ಅಧ್ಯಕ್ಷ, ಸಿಡಿಎ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅವರು ಪಕ್ಷ ಅಧಿಕಾರಕ್ಕೆ ಬಂದರೂ ಯಾವುದೇ ಹುದ್ದೆ ನೀಡದೇ ಇರುವುದರ ಬಗ್ಗೆ ಅಸಮಾಧಾನಗೊಂಡಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್ ಮಾಡಿದರೂ ನಾಯಕರಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ.

ಜಿಲ್ಲಾ ಕಾಂಗ್ರೆಸ್‌ನಲ್ಲಿ ಹಿರಿಯರಾಗಿದ್ದ ಅವರು 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಅವರ ರಾಜೀನಾಮೆಯಿಂದ ನಾಯಕರಲ್ಲಿ ಹೊಂದಾಣಿಕೆ ಕೊರತೆ ಎದ್ದು ಕಾಣುತ್ತಿದೆ. ಐದಕ್ಕೆ ಐದು ವಿಧಾನಸಭಾ ಕ್ಷೇತ್ರದಲ್ಲಿ ಜಯಭೇರಿ ಸಾಧಿಸಿರುವ ಕಾಂಗ್ರೆಸ್‌ಗೆ ಇದು ಆಂತರಿಕ ಸಂಘರ್ಷಕ್ಕೆ ಮುನ್ನುಡಿ ಬರೆದಂತಾಗಿದೆ.

ಇದನ್ನೂ ಓದಿ: ದೆಹಲಿ ಪ್ರವಾಸಕ್ಕೆ ಹೊರಟು ನಿಂತ ಸತೀಶ್ ಜಾರಕಿಹೊಳಿ, ಸಾಹುಕಾರ್ ಜೊತೆ ರಾಜಣ್ಣ ರಹಸ್ಯ ಮಾತುಕತೆ

ನಾಯಕತ್ವ ಬದಲಾವಣೆ ಬಗ್ಗೆ ಸತೀಶ್‌ ಜಾರಕಿಹೊಳಿ ಹೇಳಿದ್ದೇನು..?: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿದ್ದರೂ, ಪ್ರಸ್ತುತ ಯಾವುದೇ ಹಂತದಲ್ಲೂ ನಾಯಕತ್ವ ಬದಲಾವಣೆ ವಿಚಾರ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಚರ್ಚೆ ಆಗುತ್ತಿದೆ ಅಷ್ಟೇ, ಆದರೆ ಯಾವಾಗ ಎಂಬುದು ಯಾರಿಗೂ ಗೊತ್ತಿಲ್ಲ. ಇವತ್ತೂ ಇಲ್ಲ ನಾಳೆಯೂ ಇಲ್ಲ, ಮುಂದೆಯೂ ಇಲ್ಲ. ನಮ್ಮ ಹಂತದಲ್ಲಿ ಯಾವುದೂ ಆಗುವುದಿಲ್ಲ. ಅಂತಿಮ ತೀರ್ಮಾನ ಹೈಕಮಾಂಡ್‌ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯಮಂತ್ರಿ ಎಷ್ಟು ದಿನ ಇರ್ತಾರೆ ಎಂಬ ಹೇಳಿಕೆಗಳ ಕುರಿತು ಪ್ರತಿಕ್ರಿಯಿಸಿದ ಸಚಿವರು, ಇಂತಹ ಮಾತುಗಳನ್ನು ಎಲ್ಲರೂ ಸಾಮಾನ್ಯವಾಗಿ ಹೇಳುತ್ತಾರೆ. ಇದು ಹೊಸದೇನಲ್ಲ, ಪ್ರಾಕ್ಟಿಸ್ ಆಗಿದೆ. ಆದರೆ ಸದ್ಯದ ಸಿಎಂ ಬದಲಾವಣೆ ಇಲ್ಲ ಎಂದು ಸತೀಶ್‌ ಜಾರಕಿಹೊಳಿ ತಿಳಿಸಿದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಅಸ್ಸಾಂ ವೀಕ್ಷಕರಾಗಿ ನೇಮಕ ಮಾಡಿದ ವಿಚಾರದ ಬಗ್ಗೆ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಗೆ ವೀಕ್ಷಕರ ಜವಾಬ್ದಾರಿ ನೀಡಲಾಗಿದೆ. ಬೇರೆಯವರಿಗೂ ಉಸ್ತುವಾರಿ ನೀಡಲಾಗಿದೆ. ಚುನಾವಣೆ ಮುಗಿಯುವವರೆಗೆ ಅವರು ಅಲ್ಲೇ ಇರಬೇಕಾಗುತ್ತದೆ ಎಂದು ಹೇಳಿದರು.

ಡಿಕೆ ಶಿವಕುಮಾ‌ರ್ ಹಸ್ತಕ್ಷೇಪದ ಬಗ್ಗೆ ಹೆಚ್‌ಡಿ ಕುಮಾರಸ್ವಾಮಿ ಆರೋಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಲ್ಲಿ ಹೋದಾಗ ಸಭೆ ಮಾಡಿರಬಹುದು. ಸಚಿವರಾಗಿರದಿದ್ದರೂ ಸಭೆ ಮಾಡಿರಬಹುದು. ಅದನ್ನು ತಪ್ಪು ಎಂದು ಹೇಗೆ ಹೇಳಬಹುದು? ಅವರ ಜಾಗದಲ್ಲಿ ಯಾರೇ ಇದ್ದರೂ ಹಾಗೇ ಮಾಡುತ್ತಿದ್ದರು. ಕುಮಾರಸ್ವಾಮಿ ಅವರ ಹೇಳಿಕೆಗೆ ಬೇರೆ ವ್ಯಾಖ್ಯಾನ ಇರಬಹುದು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಹೆಚ್ಚಿನ ಸುದ್ದಿ

Change Language »
While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!