ನವದೆಹಲಿ: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಬದಲಾವಣೆಯ ಚರ್ಚೆ ಬಿರುಸುಗೊಂಡಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಕೈಗೊಂಡಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.
ಈ ಬೆಳವಣಿಗೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವ ವೇಳೆ ಮೊದಲ 2.5 ವರ್ಷ ಅವಧಿಗೆ ಸಿದ್ದರಾಮಯ್ಯ ಸಿಎಂ ಆಗಿರಬಹುದು,ಆ ನಂತರ ಮುಂದಿನ 2.5 ವರ್ಷ ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಒಪ್ಪಂದ ಮಾಡಿಕೊಳ್ಳಲಾಗಿತ್ತು ಎಂಬುದನ್ನು ಡಿಕೆ ಶಿವಕುಮಾರ್ ಪ್ರಿಯಾಂಕ ಗಾಂಧಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.
ಆದ್ರೆ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ ಡಿಕೆ ಶಿವಕುಮಾರ್,ನಾನು ದೆಹಲಿಗೆ ಬಂದಿದ್ದೆ.ಹೀಗಾಗಿ ಸಹಜವಾಗಿ ಪ್ರಿಯಾಂಕ ಗಾಂಧಿ ಅವರನ್ನು ಭೇಟಿಯಾಗಿದ್ದೇನೆ ಎಂದಷ್ಟೇ ಸೀಮಿತ ಪ್ರತಿಕ್ರಿಯೆ ನೀಡಿ ಅಲ್ಲಿಂದ ತೆರಳಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಆದ್ರೆ 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ನಿಜವಾಗಿಯೂ ಈ ರೀತಿಯ ಅಧಿಕಾರ ಹಂಚಿಕೆ ಒಪ್ಪಂದ ನಡೆದಿತ್ತೇ ಎಂಬ ಪ್ರಶ್ನೆಗೆ ಇದುವರೆಗೂ ಸಿಎಂ ಆಗ್ಲಿ ಅಥವಾ ಡಿಸಿಎಂ ಆಗ್ಲಿ ಬಹಿರಂಗವಾಗಿ ಪ್ರತಿಕ್ರಿಯಿಸಿಲ್ಲ.ಆದ್ರೆ ಸದ್ಯದ ಬೆಳವಣಿಗೆಯನ್ನು ಗಮನಿಸಿದಾಗ ಈ ರೀತಿಯ ಚರ್ಚೆಗಳಿಗೆ ಪುಷ್ಠಿ ಸಿಕ್ಕಂತೆ ಭಾಸವಾಗುತ್ತಿದೆ.