ಇಂದೋರ್: ರಾಮನವಮಿಯ ಭಾರೀ ನೂಕುನುಗ್ಗಲಿನ ಕಾರಣ ದೇವಸ್ಥಾನದ ಬಾವಿಯೊಳಕ್ಕೆ ನೂರಾರು ಜನರು ಬಿದ್ದ ಪ್ರಕರಣದಲ್ಲಿ ಇದೀಗ ಸಾವಿನ ಸಂಖ್ಯೆ 35 ದಾಟಿದೆ. ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಬೇಲೇಶ್ವರ್ ಮಹಾದೇವ್ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ನಡೆದ ಕಾರ್ಯಕ್ರಮ ವೀಕ್ಷಿಸಲು ಹಲವರು ಬಾವಿಯ ಛಾವಣಿ ಮೇಲೆ ನಿಂತದ್ದೇ ಈ ಘಟನೆಗೆ ಕಾರಣ ಎನ್ನಲಾಗಿದೆ.
“ಘಟನೆಯಲ್ಲಿ 35 ಮಂದಿ ಮೃತಪಟ್ಟಿದ್ದಾರೆ. ಒಬ್ಬರು ನಾಪತ್ತೆಯಾಗಿದ್ದು, 14 ಜನರನ್ನು ರಕ್ಷಿಸಲಾಗಿದೆ. ಇಬ್ಬರು ಚಿಕಿತ್ಸೆ ಪಡೆದ ನಂತರ ಮನೆಗೆ ಹಿಂದಿರುಗಿದ್ದಾರೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಇಂದೋರ್ ಜಿಲ್ಲಾಧಿಕಾರಿ ಇಳಯರಾಜ ಮಾಹಿತಿ ನೀಡಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಕಳೆದ 18 ಗಂಟೆಗಳ ಹಿಂದೆ ಆರಂಭವಾಗಿದ್ದು, ಇನ್ನೂ ಮುಂದುವರಿದಿದೆ.