ನವದೆಹಲಿ: 27 ವರ್ಷದ ಬಳಿಕ ದೆಹಲಿಯಲ್ಲಿ ಗೆದ್ದ ಬಿಜೆಪಿ ಇಂದು ತನ್ನ ಹೊಸ ಸಿಎಂ ಅನ್ನು ಘೋಷಿಸುವ ನಿರೀಕ್ಷೆ ಇತ್ತು. ಆದರೆ ಇದೀಗ ಪಕ್ಷವು ಸಿಎಂ ಹೆಸರನ್ನು ಸಸ್ಪೆನ್ಸ್ ಆಗಿಯೇ ಉಳಿಸಿದೆ.
ಇನ್ನು ಮುಖ್ಯಮಂತ್ರಿ ಮತ್ತು ಹೊಸ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ರಾಮಲೀಲಾ ಮೈದಾನದಲ್ಲಿ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಸಮಾರಂಭ ಆರಂಭವಾಗಲಿದೆ. ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಮಧ್ಯಾಹ್ನ 12.35 ಕ್ಕೆ ನಿಯೋಜಿತ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟಕ್ಕೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರು ಮತ್ತು ಎನ್‌ಡಿಎ ಮುಖ್ಯಮಂತ್ರಿಗಳು-ಉಪ ಮುಖ್ಯಮಂತ್ರಿಗಳು ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.
ಇನ್ನು ದೆಹಲಿಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ರಾಮಲೀಲಾ ಮೈದಾನದಲ್ಲಿ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ಇವೊಂದು ಕಾರ್ಯಕ್ರಮಕ್ಕೆ ಮೂರು ದೊಡ್ಡ ವೇದಿಕೆಗಳನ್ನು ನಿರ್ಮಿಸಲಾಗಿದೆ.
ಎರಡನೇ ವೇದಿಕೆಯಲ್ಲಿ ಧಾರ್ಮಿಕ ಮುಖಂಡರಿಗೆ ಕುಳಿತುಕೊಳ್ಳಲಿದ್ದು, ದೆಹಲಿಯ ಪ್ರಸ್ತುತ ಸಂಸದರು ಮತ್ತು ಚುನಾಯಿತ ಶಾಸಕರು ಮೂರನೇ ವೇದಿಕೆಯಲ್ಲಿ ಕುಳಿತುಕೊಳ್ಳುತ್ತಾರೆ. ಚಲನಚಿತ್ರ ತಾರೆಯರಿಗೆ ವೇದಿಕೆಯ ಕೆಳಗೆ ಸ್ಥಳಾವಕಾಶ ನೀಡಲಾಗಿದೆ ಎಂದು ವರದಿಯಾಗಿದೆ.