Thursday, April 16, 2026
Homeಟಾಪ್ ನ್ಯೂಸ್SIDDARAMAIAH: ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್.. ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ!

SIDDARAMAIAH: ಕಾಂಗ್ರೆಸ್​ನಲ್ಲಿ ಜೋರಾದ ಡಿನ್ನರ್ ಪಾಲಿಟಿಕ್ಸ್.. ಸಚಿವರಿಗೆ ಸಿದ್ದರಾಮಯ್ಯ ಔತಣಕೂಟ!

ಬೆಂಗಳೂರು : ಕಾಂಗ್ರೆಸ್​ನಲ್ಲಿ ‘ಡಿನ್ನರ್ ರಾಜಕೀಯ’ ಸದ್ದು ಮಾಡುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಲವೇ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾ.16ರಂದು ಸಿಎಂ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಕಾವೇರಿಯಲ್ಲಿ ಸಚಿವರ ಜೊತೆ ಡಿನ್ನರ್ ಮೀಟಿಂಗ್
ಬಜೆಟ್ ಅಧಿವೇಶನ ನಡೆಯುತ್ತಿರುವ ವೇಳೆಯೇ ಕಾಂಗ್ರೆಸ್ ಪಾರ್ಟಿಯಲ್ಲಿ ಆಂತರಿಕ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿವೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್​ ಡಿನ್ನರ್ ಪಾರ್ಟಿ ಆಯೋಜಿಸಿದ್ದರಯ. ಇದೀಗ ಸಿಎಂ ಸಿದ್ದರಾಮಯ್ಯ ಸಚಿವರನ್ನ ಊಟಕ್ಕೆ ಕರೆದಿದ್ದಾರೆ.

ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಬೆನ್ನಲ್ಲೇ ಸಿಎಂ ಮತ್ತು ಡಿಸಿಎಂ ಬಣಗಳಿಗೆ ಸೇರಿರುವ ಕೆಲವು ಶಾಸಕರು ಪ್ರತ್ಯೇಕವಾಗಿ ಸಭೆ ನಡೆಸಿದ್ದು ರಾಜಕೀಯ ಚರ್ಚೆಗೆ ಕಾರಣವಾಗಿತ್ತು. ಇದೀಗ ಕಾವೇರಿ ನಿವಾಸದಲ್ಲಿ ಸಚಿವರ ಜೊತೆ ಸಿದ್ದರಾಮಯ್ಯ ನಡೆಸುವ ಡಿನ್ನರ್​ ಮೀಟಿಂಗ್​ ನಲ್ಲಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

CLP ಸಭೆಯಲ್ಲಿ ಸಚಿವರ ವಿರುದ್ಧ ಶಾಸಕರು ಚಾರ್ಜ್ ಶೀಟ್ ಸಲ್ಲಿಸಿದ ವಿಚಾರ, GBA ಸೇರಿದಂತೆ ಸ್ಥಳೀಯ ಚುನಾವಣೆಗಳ ತಯಾರಿ ಹಾಗೂ ಒಳಮೀಸಲಾತಿ ಗೊಂದಲ ಬಗ್ಗೆ ಹರಿಸುವ ಬಗ್ಗೆ ಒಂದಷ್ಟು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಸಭೆಯಲ್ಲಿ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಸಂಪುಟ ಪುನರ್‌ರಚನೆಗಾಗಿ ಒತ್ತಡ ಹೇರುವ ತಂತ್ರಗಾರಿಕೆ ನಡೆಸಿದ್ದಾರೆ ಎಂಬ ಮಾತುಗಳು ಸಹ ಕೇಳಿಬಂದಿವೆ. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಡಿನ್ನರ್ ಕೂಟ ಆಯೋಜಿಸಿರುವುದು ರಾಜಕೀಯ ವಲಯದಲ್ಲಿ ವಿವಿಧ ರೀತಿಯ ಚರ್ಚೆಗೆ ಗ್ರಾಸವಾಗಿದೆ.

ಈ ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಶೀಘ್ರದಲ್ಲೇ ಘೋಷಣೆಯಾಗಬಹುದಾದ ಪಂಚ ರಾಜ್ಯಗಳ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಗಳಲ್ಲಿ ಯಾರು ಭಾಗವಹಿಸಬೇಕು ಎಂಬುವುದರ ಕುರಿತಾಗಿಯೂ ಚರ್ಚೆ ನಡೆಯುವ ನಿರೀಕ್ಷೆಇದೆ.

ಸಂಪುಟ ಪುನರ್​​​​​ ರಚನೆಗೆ ಹೆಚ್ಚಿದ ಒತ್ತಡ
ಮತ್ತೊಂದೆಡೆ ಸಂಪುಟ ಪುನರ್​​​ ರಚನೆಗೆ ಒತ್ತಡ ಹೆಚ್ಚಿದ್ದು, ದೆಹಲಿಗೆ ತೆರಳಲು ಕಾಂಗ್ರೆಸ್ ಹಿರಿಯ ಶಾಸಕರು ಮುಂದಾಗಿದ್ದಾರೆ. 30 ಶಾಸಕರಿಂದ ದೆಹಲಿ ದಂಡಯಾತ್ರೆಗೆ ಸಿದ್ಧತೆ ನಡೆದಿದೆ ಎನ್ನಲಾಗ್ತಿದೆ. ಸಚಿವ ಸ್ಥಾನಕ್ಕಾಗಿ ಒತ್ತಡ ಹೇರಲು ಹಿರಿಯ ಶಾಸಕರ ರಣತಂತ್ರ ರೂಪಿಸಿದ್ದು, ಮಾರ್ಚ್ 26 ರಂದು ರಾತ್ರಿ ಬೆಂಗಳೂರಿಂದ ದೆಹಲಿಗೆ ತೆರಳಲಿದ್ದಾರಂತೆ.

ಹೆಚ್ಚಿನ ಸುದ್ದಿ

Change Language »
error: Content is protected !!