ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಶೈಕ್ಷಣಿಕ ವಿದ್ಯಾರ್ಹತೆ ಬಗ್ಗೆ ಮಾಹಿತಿ ನೀಡಬೇಕು ಎಂದಿರುವ ಶಿವಸೇನೆ ನಾಯಕ ಸಂಜಯ್ ರಾವತ್, ವಿದ್ಯಾರ್ಹತೆಯನ್ನು ಅಡಗಿಸುವ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದ್ದಾರೆ.
ಪ್ರಧಾನಿಯ ಡಿಗ್ರಿ ಸರ್ಟಿಫಿಕೆಟನ್ನು ಸಂಸತ್ ನ ಪ್ರವೇಶದ್ವಾರದಲ್ಲಿ ಅಳವಡಿಸಬೇಕು. ದೇಶದ ಜನತೆ ಮತ್ತು ಜನಪ್ರತಿನಿಧಿಗಳಿಗೆ ಅವರ ವಿದ್ಯಾರ್ಹತೆ ಬಗ್ಗೆ ತಿಳಿಯಬೇಕು ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಪ್ರಧಾನಿ ಮೋದಿಯ ಡಿಗ್ರಿ ಸರ್ಟಿಫಿಕೆಟ್ ಬಗ್ಗೆ ಮಾಹಿತಿ ನೀಡಬೇಕಾದ ಅವಶ್ಯಕತೆಯಿಲ್ಲ ಎಂದು ಗುಜರಾತ್ ಹೈಕೋರ್ಟ್ ಇತ್ತೀಚೆಗಷ್ಟೇ ಹೇಳಿತ್ತು, ಜೊತೆಗೆ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ 25 ಸಾವಿರ ರೂಪಾಯಿ ದಂಡ ವಿಧಿಸಿತ್ತು.