Thursday, April 16, 2026
Homeಟಾಪ್ ನ್ಯೂಸ್DJ HALLI RIOTS : ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ 7 ವರ್ಷ...

DJ HALLI RIOTS : ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್‌ ಅವರನ್ನು ನಿಂದನೆ ಮಾಡಲಾಗಿದೆ ಎಂದು ಡಿಜೆ ಹಳ್ಳಿ (DJ Halli Riots) ಹಾಗೂ ಕೆ.ಜೆ.ಹಳ್ಳಿ (KJ Halli) ಗಲಭೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಎನ್​ಐಎ ಕೋರ್ಟ್ (NIA Court) ಶಿಕ್ಷೆ ವಿಧಿಸಿದೆ.

 7 ವರ್ಷ ಜೈಲು ಶಿಕ್ಷೆ
ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಪ್ರಕರಣದಲ್ಲಿ ಮೂವರು ಆರೋಪಿಗಳು ತಪ್ಪೊಪ್ಪಿಕೊಂಡಿದ್ದರು. ಹಾಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ವಿಶೇಷ ನ್ಯಾಯಾಲಯ  ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್‌ಗೆ ಶಿಕ್ಷೆ ವಿಧಿಸಿದ್ದು, 7 ವರ್ಷ ಜೈಲು ಶಿಕ್ಷೆ ಹಾಗೂ ತಲಾ 46 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದೆ.

ಇದನ್ನೂ ಓದಿ: ಡಿಜೆ ಹಳ್ಳಿ ಗಲಭೆ ಆರೋಪಿಗಳ ವಿಷಯಕ್ಕೆ ನೋ ಕಮೆಂಟ್ಸ್ ಎಂದ ಕಮಿಷನರ್!

ಏನಿದು ಪ್ರಕರಣ?

2020 ರಲ್ಲಿ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದಿದ್ದ ಕೋಮು ಗಲಭೆಯಲ್ಲಿ ಪೊಲೀಸ್ ಠಾಣೆ ಮತ್ತು ಸ್ಥಳೀಯ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಲಾಗಿತ್ತು. ಅಂದಿನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಸಂಬಂಧಿ ಅವರ ಸಾಮಾಜಿಕ ಮಾಧ್ಯಮದ ಪೋಸ್ಟ್‌ನಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್‌ ಅವರನ್ನು ನಿಂದನೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಜೊತೆಗೆ ಅಪಾರ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಯನ್ನು ನಾಶಪಡಿಸಲಾಗಿತ್ತು. ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು 57 ಪ್ರಕರಣಗಳು ದಾಖಲಾಗಿತ್ತು. ಒಟ್ಟಾರೆ 230 ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿತ್ತು. ಅವರ ಪೈಕಿ 11 ಮಂದಿ ಈಗಲೂ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ಮಿಕ್ಕವರು ಜಾಮೀನು ಪಡೆದು ಹೊರಬಂದಿದ್ದರೆ, ನಾಲ್ವರು ಆರೋಪಿಗಳು ಸಾವನ್ನಪ್ಪಿದ್ದರು. ಬಹುತೇಕ ಪ್ರಕರಣಗಳಲ್ಲಿ ತನಿಖೆ ಸಂಪೂರ್ಣಗೊಂಡು ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಲಾಗಿತ್ತು. ಎನ್ಐಎ ವಿಶೇಷ ನ್ಯಾಯಾಲಯಲ್ಲಿ ಪ್ರರಕಣ ವಿಚಾರಣೆಯ ಹಂತದಲ್ಲಿತ್ತು.

ಕೇಸ್​ ವಾಪಸ್​​​​​​​ಗೆ ಮನವಿ ಮಾಡಿದ್ದ ರೋಷನ್​ ಬೇಗ್ 
ಇನ್ನು ಕಳೆದ ವರ್ಷ ಹಳೇ ಹುಬ್ಬಳ್ಳಿ ಗಲಭೆ ಪ್ರಕರಣವನ್ನು ರಾಜ್ಯ ಸರ್ಕಾರ ಹಿಂಪಡೆದಿದ್ದ ಕಾರಣದಿಂದ ಬೆಂಗಳೂರಿನ ಕೆಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಗಲಭೆಯ ಪ್ರಕರಣದ ಆರೋಪಿಗಳ ಕೇಸ್ ವಾಪಸ್​ ಪಡೆಯುವಂತೆ ಇದೀಗ ಮಾಜಿ ಸಚಿವ ರೋಷನ್​ ಬೇಗ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದರು.

ಇದನ್ನೂ ಓದಿ: ಕೆಜಿ ಹಳ್ಳಿ-ಡಿಜೆ ಹಳ್ಳಿ ವರದಿ: ಸರ್ಕಾರದ ಕ್ರಮ ಸರಿಯಾಗಿದೆ ಎಂದ ಬೊಮ್ಮಾಯಿ

ಸಮಾಜದ ಮುಖಂಡರ ಮನವಿ ಮಾಡಿಕೊಂಡಿದ್ದಾರೆ. ಗೂಂಡಾ ಕಾಯ್ದೆಯಲ್ಲಿರುವವರನ್ನು ಅರೆಸ್ಟ್ ಮಾಡಿದ್ದರೆ ತೊಂದರೆ ಇಲ್ಲ. ಆದರೆ ಸಣ್ಣ ಹುಡುಗರನ್ನೂ ಪ್ರಕರಣದಲ್ಲಿ ಬಂಧಿಸಲಾಗಿದೆ. ಅಮಾಯಕರನ್ನು ಗುರುತಿಸಿ ಅವರ ವಿರುದ್ಧ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮಾಧ್ಯಮ ಮೂಲಕ ಮನವಿ ಮಾಡಿದ್ದರು.

ಹೆಚ್ಚಿನ ಸುದ್ದಿ

Change Language »
error: Content is protected !!