ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಹೊಸ ಜೋಡೆತ್ತು ಅಬ್ಬರ ಶುರುವಾಗುತ್ತಿದೆ. ಡಿಕೆ ಶಿವಕುಮಾರ್ (DK Shivakumar), ಸತೀಶ್ ಜಾರಕಿಹೊಳಿ (Satish jarakiholi) ಹಳೇ ದ್ವೇಷ ಮರೆತು ಹೊಸ ಸ್ನೇಹ (Friendship) ಆರಂಭಿಸಿದ್ದಾರೆ. ಅದರ ಪರಿಣಾಮವೂ ರಾಜ್ಯ ರಾಜಕಾರಣದಲ್ಲಿ ಕಾಣಿಸುತ್ತಿದೆ.
ಕರ್ನಾಟಕದಲ್ಲಿ ನವಂಬರ್ 20 ರಿಂದ ಸಿಎಂ ಕುರ್ಚಿಗಾಗಿ ಫೈಟ್ ಶುರುವಾಗಿದೆ. ಡಿಸಿಎಂ ಡಿಕೆಶಿಗೆ ಸಿಎಂ ಸ್ಥಾನ ನೀಡಬೇಕೆಂದು ಬೆಂಬಲಿಗ ಶಾಸಕರು, ಸಚಿವರು ದೆಹಲಿ ಯಾತ್ರೆ ನಡೆಸಿದ್ದರು. ಹೀಗೆ ಎರಡು ಮೂರು ತಂಡಗಳು ದೆಹಲಿಗೆ ಹೋಗಿ ಬಂದಿವೆ. ಕಾಂಗ್ರೆಸ್ ಹೈಕಮ್ಯಾಂಡ್ ಮಧ್ಯಪ್ರವೇಶಿಸಿ, ಬ್ರೇಕ್ ಫಾಸ್ಟ್ ಮೀಟಿಂಗ್ ಆರೇಂಜ್ ಮಾಡಿತ್ತು. ಹೀಗಾಗಿ ಈಗ ತಾತ್ಕಾಲಿಕವಾಗಿ ಸಿಎಂ ಕುರ್ಚಿ ಫೈಟ್‌ಗೆ ಬ್ರೇಕ್ ಬಿದ್ದಿದೆ.
ನಿನ್ನೆ ದಿಢೀರ್ ಬೆಳವಣಿಗೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಆ ಮೂಲಕ ಸತೀಶ್ ಜಾರಕಿಹೊಳಿ ಕೆಪಿಸಿಸಿ ಕುರ್ಚಿಗೇರುವ ಹಾದಿ ಸುಗಮ ಮಾಡಿಕೊಂಡ್ರಾ ಎಂಬ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್‌ನಲ್ಲಿ ಬಣ ಬಡಿದಾಟಕ್ಕೆ ಬ್ರೇಕ್ ಬಿದ್ದಿದ್ದು, ಹೊಸ ದೋಸ್ತಿ ಪರ್ವಕ್ಕೆ ಮುನ್ನುಡಿ ಹಾಡಿದಂತೆ ಕಾಣ್ತಿದೆ. ಬೆಂಗಳೂರಿನಲ್ಲಿ ಡಿಕೆಶಿ-ಸತೀಶ್ ಗುಪ್ತ್ ಗುಪ್ತ್ ಮೀಟಿಂಗ್ ನಡೆಸಿದ್ದು, 40 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಚರ್ಚೆ ವೇಳೆ, ಕೆಪಿಸಿಸಿ ಕುರ್ಚಿ ನನಗೆ, ಸಿಎಂ ಕುರ್ಚಿ ನಿಮಗೆ ಅಂತ ಡೀಲ್ ಆಯ್ತಾ ಎಂಬ ಚರ್ಚೆ ನಡೆಯುತ್ತಿವೆ.
ಎಲ್ಲಿ ನಡೀತು ರಹಸ್ಯ ಮಾತುಕತೆ?
ಕುರ್ಚಿ ಕಾಳಗದ ಮಧ್ಯೆ ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಆ ಭೇಟಿ ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿತ್ತು. ಸತೀಶ್ ಬಳಿ ಕೊಟ್ಟ ಮಾತಿನ ಬಗ್ಗೆ ಡಿಕೆಶಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿತ್ತು. ಸದ್ಯ ಎಲ್ಲವೂ ಕೂಲ್ ಕೂಲ್ ಆಗಿರುವಾಗಲೇ ಮತ್ತೊಮ್ಮೆ ಸಚಿವ ಸತೀಶ್ ಜಾರಕಿಹೊಳಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿಯಾಗಿದ್ದಾರೆ.
ಖಾಸಗಿ ಸ್ಥಳದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಏನಾದರೂ ಚರ್ಚೆ ಆಯಿತೇ ಎಂಬ ಪ್ರಶ್ನೆಗೆ ಸತೀಶ್ ಬೇರೆಯೇ ರೀತಿಯಲ್ಲಿ ಉತ್ತರಿಸಿದ್ದಾರೆ. ಮದುವೆಯಲ್ಲಿ ಇಬ್ಬರು ಭೇಟಿಯಾಗಿದ್ದೆವು ಅಷ್ಟೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಆ ಕಡೆ ಡಿಕೆಶಿ, ಸತೀಶ್ ಜಾರಕಿಹೊಳಿ ಚರ್ಚೆ ನಡೆಸುತ್ತಿದ್ರೆ, ಈ ಕಡೆ ಕೋಲಾರದ ರಾಜಕೀಯದಲ್ಲಿ ಸಾಹುಕಾರ್ ಮಿಂಚಿದ್ರು. ಸತೀಶ್ ಸಮ್ಮುಖದಲ್ಲಿ ಕೋಲಾರದ ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರಿದ್ರು. ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಲ್ಲ, ಕಾರ್ಯಾಧ್ಯಕ್ಷರೂ ಅಲ್ಲ, ಕೋಲಾರ ಉಸ್ತುವಾರಿ ಸಚಿವರೂ ಅಲ್ಲ. ಆದ್ರೂ, ಕೋಲಾರ ಮುಖಂಡರು ಸತೀಶ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದು ಅಚ್ಚರಿಗೆ ಕಾರಣವಾಯ್ತು.
ಸತೀಶ್ ನೇತೃತ್ವದಲ್ಲಿ ‘ಕೈ’ ಹಿಡಿದ ಮಾಲೂರು ಮುಖಂಡರು!
ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಲ್ಲ. ಕೋಲಾರ ಉಸ್ತುವಾರಿಯೂ ಅಲ್ಲ. ಆದರೂ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಕೋಲಾರದ ಮಾಲೂರು ತಾಲೂಕು ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಗುರುವಾರವಷ್ಟೇ ಮಾಲೂರು ಮುಖಂಡ ಎನ್.ವೆಂಕಟರಾಮ್ ಎಂಬುವವರು ಸತೀಶ್ ಅವರ ಬೆಂಗಳೂರಿನ ಗೃಹ ಕಚೇರಿಯಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸತೀಶ್ ಜಾರಕಿಹೊಳಿ, ನಮ್ಮ ಜೊತೆ ಇದ್ದವರೇ ಅವರು ವಾಪಸ್ ಬಂದಿದ್ದಾರೆ ಅಷ್ಟೇ ಎಂದಿದ್ದಾರೆ.