Saturday, January 25, 2025
Homeಟಾಪ್ ನ್ಯೂಸ್ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಹುದ್ದೆ ತಪ್ಪಿಸಿದ್ದೇ ಡಿಕೆಶಿ

ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಹುದ್ದೆ ತಪ್ಪಿಸಿದ್ದೇ ಡಿಕೆಶಿ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ ಕಾರಣ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಆರೋಪ ಮಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗುವುದಾದರೆ ಅವರ ಜೊತೆಗೆ ಕೆಲಸ ಮಾಡಲು ನಾನು ಸಿದ್ಧ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 2004ರಲ್ಲಿ ಎಸ್. ಎಂ.ಕೃಷ್ಣ ಅವರನ್ನು ಸಿಎಂ ಮಾಡಲಾಯಿತು. ಆಗ ಅವರಿಗೆ ಸಿಎಂ ಹುದ್ದೆ ತಪ್ಪಿಸಲಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2013ರಲ್ಲಿ ಡಾ. ಜಿ.ಪರಮೇಶ್ವರ್ ಅವರು ಸಿಎಂ ಆಗುವ ಅವಕಾಶ ತಪ್ಪಿಸಲಾಯ್ತು. ಇನ್ನು ಸಿದ್ದರಾಮಯ್ಯ ಮತ್ತು ಅವರ ಗ್ಯಾಂಗ್ ಪರಮೇಶ್ವರ್‌ರನ್ನು ಸೋಲಿಸಿದ್ರು. ಆ ಮೂಲಕ ಪರಮೇಶ್ವರ್ ಗೆ ಸಿಎಂ ಹುದ್ದೆ ತಪ್ಪಿಸಿದರು ಎಂದು ಆರೋಪ ಮಾಡಿದರು.

ಡಿ.ಕೆ.ಶಿವಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ನೆಲೆ ಕಳೆದುಕೊಂಡಿರುವುದು ಗೊತ್ತಾಗುತ್ತದೆ. ಕಾಂಗ್ರೆಸ್‌ನವರು ದಲಿತ ಸಿಎಂ ಮಾಡ್ತೀವಿ ಅಂತ ಮಾಡಲಿಲ್ಲ. ಜೆಡಿಎಸ್ ಜತೆ ಮೈತ್ರಿ ವೇಳೆ ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಮಾಡುವಂತೆ ಜೆಡಿಎಸ್ ನವರು ಹೇಳಿದ್ರು. ಆಗ ಕಾಂಗ್ರೆಸ್‌ನಲ್ಲಿ ಖರ್ಗೆ ಸಿಎಂ ಆಗೋದನ್ನು ತಪ್ಪಿಸಿದ್ದರು ಎಂದು ಆರೋಪ ಮಾಡಿದರು.

ಹೆಚ್ಚಿನ ಸುದ್ದಿ

error: Content is protected !!