ಒಳ ಮೀಸಲಾತಿ ವಿಷಯದಲ್ಲಿ ಬಂಜಾರ ಸಮುದಾಯದ ಪ್ರತಿಭಟನೆ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಮನೆಗೆ ಕಲ್ಲು ಬಿದ್ದ ಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಇದು ಬಿಜೆಪಿಯವರೇ ನಡೆಸಿದ ಕೃತ್ಯವಾಗಿದ್ದು, ಬೇರೆಯವರ ತಲೆಗೆ ಇದನ್ನು ಕಟ್ಟುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದಾರೆ.
ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ ಈಗ ಯಾವುದೇ ಸ್ಥಾನದಲ್ಲಿ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅವರ ಮನೆಯ ಮುಂದೆ ಯಾರೂ ಪ್ರತಿಭಟನೆ ನಡೆಸಲಿಲ್ಲ. ಇದನ್ನೆಲ್ಲಾ ನೋಡಿದರೆ ಬಿಜೆಪಿ ಆಂತರಿಕ ಕಚ್ಚಾಟಕ್ಕೆ ಬಿ.ಎಸ್.ಯಡಿಯೂರಪ್ಪ ಬಲಿಪಶು ಆಗುತ್ತಿದ್ದಾರೆಯೇ ಎಂಬ ಸಂಶಯ ವ್ಯಕ್ತವಾಗುತ್ತದೆ. ಬಿಜೆಪಿ ಪಕ್ಷದಲ್ಲಿಯೇ ಆವರನ್ನು ಮೂಲೆಗುಂಪು ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.