Saturday, May 16, 2026
Homeಟಾಪ್ ನ್ಯೂಸ್DONALD TRUMP : ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು - ಪ್ರಧಾನಿ ಮೋದಿಗೆ ಡೊನಾಲ್ಡ್...

DONALD TRUMP : ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು – ಪ್ರಧಾನಿ ಮೋದಿಗೆ ಡೊನಾಲ್ಡ್ ಟ್ರಂಪ್ ಅಭಿನಂದನೆ!

ವಾಷಿಂಗ್ಟನ್‌: ಪಶ್ಚಿಮ ಬಂಗಾಳ(Bengal) ಮತ್ತು ಅಸ್ಸಾಂ(Assam) ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ(BJP) ಐತಿಹಾಸಿಕ ಜಯ ಸಾಧಿಸಿದ ಹಿನ್ನೆಲೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರು ಪ್ರಧಾನಿ ನರೇಂದ್ರ ಮೋದಿ(PM Modi) ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ವೈಟ್ ಹೌಸ್ ವಕ್ತಾರ ಕುಶ್ ದೇಸಾಯಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಬಿಜೆಪಿಯ ಈ ಗೆಲುವನ್ನು “ಐತಿಹಾಸಿಕ ಮತ್ತು ಅತ್ಯಂತ ನಿರ್ಣಾಯಕ” ಎಂದು ಟ್ರಂಪ್ ಶ್ಲಾಘಿಸಿದ್ದಾರೆ.

ಪ್ರಧಾನಿ ಮೋದಿ ಅವರ ನಾಯಕತ್ವದ ಗುಣಗಳನ್ನು ಮುಕ್ತಕಂಠದಿಂದ ಕೊಂಡಾಡಿರುವ ಡೊನಾಲ್ಡ್ ಟ್ರಂಪ್, “ನರೇಂದ್ರ ಮೋದಿ ಅವರಂತಹ ನಾಯಕರನ್ನು ಹೊಂದಲು ಭಾರತ ಅತ್ಯಂತ ಅದೃಷ್ಟ ಮಾಡಿದೆ” ಎಂದು ಇತ್ತೀಚಿನ ಫೋನ್ ಕರೆಯ ಸಂದರ್ಭದಲ್ಲಿ ಹೇಳಿದ್ದನ್ನು ವೈಟ್ ಹೌಸ್ ಸ್ಮರಿಸಿದೆ.

ಬಂಗಾಳದಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ: ಪಶ್ಚಿಮ ಬಂಗಾಳದ ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಬರೋಬ್ಬರಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಎರಡರಷ್ಟು ಬಹುಮತದೊಂದಿಗೆ ಇತಿಹಾಸ ಬರೆದಿದೆ.

ಈ ಮೂಲಕ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ 15 ವರ್ಷಗಳ ಸುದೀರ್ಘ ಆಡಳಿತ ಕೊನೆಗೊಂಡಿದೆ.

ಅಸ್ಸಾಂನಲ್ಲಿ ಹ್ಯಾಟ್ರಿಕ್ ಸಾಧನೆ: ಪಶ್ಚಿಮ ಬಂಗಾಳದ ಭರ್ಜರಿ ಜಯದ ಜೊತೆಗೆ, ಅಸ್ಸಾಂನಲ್ಲೂ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.ಜಾಗತಿಕ ಮಟ್ಟದಲ್ಲಿ ಗಮನ ಸೆಳೆದ ಫಲಿತಾಂಶ: ಪ್ರಾದೇಶಿಕ ಪಕ್ಷಗಳ ಭದ್ರಕೋಟೆಯಾಗಿದ್ದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿಗೆ ಅಧಿಕಾರ ಹಿಡಿದಿರುವುದು ಕೇವಲ ಭಾರತದಲ್ಲಷ್ಟೇ ಅಲ್ಲದೆ, ಅಮೆರಿಕ ಸೇರಿದಂತೆ ಜಾಗತಿಕ ರಾಜತಾಂತ್ರಿಕ ವಲಯದಲ್ಲೂ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ : ಕೊಟ್ಟ ಮಾತು ಉಳಿಸಿಕೊಳ್ಳೋಕೆ ಟಿವಿಕೆಗೆ ಬೇಕು 42 ಸಾವಿರ ಕೋಟಿ ರೂ.!

ಹೆಚ್ಚಿನ ಸುದ್ದಿ

Change Language »
error: Content is protected !!