ನವದೆಹಲಿ: ದೇಶವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿರುವಾಗ ಕೆಲವರು ನಾಯಕರ ಡಿಗ್ರಿಗಳನ್ನು ಕೇಳುತ್ತಾ ಸಮಯ ವ್ಯರ್ಥ ಮಾಡುತ್ತಿದ್ದಾರೆ ಎಂದು ಎನ್ ಸಿಪಿ ನಾಯಕ ಶರದ್ ಪವಾರ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಅರವಿಂದ್ ಕೇಜ್ರಿವಾಲ್, ಉದ್ಧವ್ ಠಾಕ್ರೆ ಸೇರಿದಂತೆ ಹಲವು ರಾಜಕೀಯ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಲೇ ಬಂದಿದ್ದಾರೆ.
ಈ ಬಗ್ಗೆ ಮಾತನಾಡಿದ ಶರದ್ ಪವಾರ್, ನಿರುದ್ಯೋಗ ಕಾನೂನು, ಸುವ್ಯವಸ್ಥೆ ಮತ್ತು ಹಣದುಬ್ಬರದಂತಹ ವಿಷಯಗಳ ಬಗ್ಗೆ ಗಮನ ಹರಿಸಬೇಕು ಮತ್ತು ಮಾತನಾಡಬೇಕು ಹೊರತು ವಿದ್ಯಾರ್ಹತೆ ಬಗ್ಗೆ ಅಲ್ಲ ಎಂದರು.
ಪ್ರಧಾನಿ ಮೋದಿಯರ ವಿದ್ಯಾರ್ಹತೆಯ ಮಾಹಿತಿ ನೀಡಬೇಕು ಎಂದಿದ್ದ ದಿಲ್ಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್ 25 ಸಾವಿರ ರೂಪಾಯಿ ದಂಡ ವಿಧಿಸಿತ್ತು.