Sunday, July 7, 2024
Homeಟಾಪ್ ನ್ಯೂಸ್SANJANA GALRANI: ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿಗೆ ಬಿಗ್‌ ರಿಲೀಫ್‌

SANJANA GALRANI: ಡ್ರಗ್ಸ್ ಪ್ರಕರಣ: ಸಂಜನಾ ಗಲ್ರಾನಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ (sanjana galrani) ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಹೈಕೋರ್ಟ್‌ (High Court) ಏಕಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿ ಎಫ್‌ಐಆರ್‌ ರದ್ದುಗೊಳಿಸಿ ಆದೇಶಿಸಿದೆ.

ಮಾದಕ ಜಾಲಕ್ಕೆ ಸ್ಯಾಂಡಲ್​ವುಡ್​ ನಂಟಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ (CCB) ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ ಬಂಧಿಸಿದ್ದರು. ಎಫ್‌ಐಆರ್ (FIR) ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಹೆಚ್ಚಿನ ಸುದ್ದಿ