ದೆಹಲಿ: ಟಿಎಂಸಿಯ(TMC) ಐಟಿ ಸೆಲ್ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಇಡಿ(ED) ಗುರುವಾರ ದಾಳಿ ನಡೆಸಿತ್ತು. ಆ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಬೆನ್ನಲ್ಲೇ ಟಿಎಂಸಿ ನಾಯಕರು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರ ಮನೆ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಎಂಟು ಮಂದಿ ಟಿಎಂಸಿ ಸಂಸದರನ್ನು ಬಂಧಿಸಲಾಯಿತು.
ಚುನಾವಣೆಗೆ ಮುನ್ನ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ಕೇಂದ್ರವು ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸಂಸದರು ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಮಾಡಿದ್ದಾರೆ.
ಕೇಂದ್ರ ತನಿಖಾ ಸಂಸ್ಥೆ ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ತನಿಖಾ ಪ್ರಕ್ರಿಯೆಗೆ “ಅಡ್ಡಿಪಡಿಸಿದ್ದಾರೆ” ಮತ್ತು ಪ್ರಮುಖ ಸಾಕ್ಷ್ಯಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿದೆ.
ಕೇಂದ್ರ ತನಿಖಾ ಸಂಸ್ಥೆ (ED) ಗುರುವಾರ ಕಲ್ಕತ್ತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಅವರು ತನಿಖಾ ಪ್ರಕ್ರಿಯೆಗೆ “ಅಡ್ಡಿಪಡಿಸಿದ್ದಾರೆ” ಮತ್ತು ಪ್ರಮುಖ ಸಾಕ್ಷ್ಯಗಳನ್ನು ಕದ್ದಿದ್ದಾರೆ ಎಂದು ಆರೋಪಿಸಿದೆ. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಯಲ್ಲಿ, ಸಿಎಂ ತಮ್ಮ ಸಾಂವಿಧಾನಿಕ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಐ-ಪ್ಯಾಕ್ ಮುಖ್ಯಸ್ಥರ ನಿವಾಸ ಪ್ರವೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಇ.ಡಿ ರೇಡ್
ಕಲ್ಲಿದ್ದಲು ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆಯ ಪ್ರಕರಣ ಸಂಬಂಧ ಗುರುವಾರ ಬೆಳಗಿನ ಜಾವ ಸಾಲ್ಟ್ ಲೇಕ್‌ನಲ್ಲಿರುವ ‘ಐ ಪ್ಯಾಕ್’ ಎಂಬ ರಾಜಕೀಯ ಸಲಹಾ ಸಂಸ್ಥೆ ಮತ್ತದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಕೋಲ್ಕತಾ ಮತ್ತು ದೆಹಲಿ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಮಧ್ಯಾಹ್ನದವರೆಗೂ ಯಾವುದೇ ತೊಂದರೆ ಇಲ್ಲದೆ ದಾಳಿ ಮುಂದುವರೆದಿತ್ತು.
ಈ ನಡುವೆ ಗುರುವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಇ.ಡಿ. ದಾಳಿ ನಡೆಸುತ್ತಿದ್ದ ಪ್ರತೀಕ್ ಜೈನ್ ಮನೆಗೆ ಬಂಗಾಳ ಪೊಲೀಸರು, ಪಕ್ಷದ ಕಾರ್ಯಕರ್ತರ ಜತೆ ನುಗ್ಗಿದ ಮಮತಾ ಅಲ್ಲಿದ್ದ ಕೆಲವೊಂದು ಕಡತಗಳನ್ನು ಎತ್ತಿಕೊಂಡು ಹೊರಗೆ ಬಂದರು. ಈ ವೇಳೆ ಪ್ರತಿಕ್ರಿಯೆ ನೀಡಿದ ದೀದಿ ‘ಇದು ರಾಜಕೀಯ ದ್ವೇಷದ ದಾಳಿ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇ.ಡಿ. ಅಧಿಕಾರಿಗಳನ್ನು ಬಳಸಿಕೊಂಡು ನಮ್ಮ ಪಕ್ಷದ ಮಾಹಿತಿ, ಅಭ್ಯರ್ಥಿಗಳ ಪಟ್ಟಿ, ಆಂತರಿಕ ಚುನಾವಣಾ ರಣತಂತ್ರದ ಮಾಹಿತಿಗಳನ್ನು ಕದಿಯುತ್ತಿದ್ದಾರೆ. ಹೀಗಾಗಿ ಅಲ್ಲಿದ್ದ ಪಕ್ಷದ ಚುನಾವಣೆಗೆ ಸಂಬಂಧಿಸಿದ ಕೆಲವೊಂದು ದಾಖಲೆಗಳನ್ನು ನಾನು ಮರಳಿ ತಂದಿದ್ದೇನೆ’ ಎಂದರು.
ಆದರೆ ಮಮತಾ ಆರೋಪ ತಳ್ಳಿಹಾಕಿದ ಜಾರಿ ನಿರ್ದೇಶನಾಲಯ, ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ ಸಂಬಂಧ ದಾಳಿ ನಡೆಸಿದ್ದೇವೆ. ಟಿಎಂಸಿ ಪಕ್ಷಕ್ಕೆ ಸಂಬಂಧಿಸಿದಂತೆ ಯಾವುದೇ ಶೋಧ ನಡೆಸಿಲ್ಲ’ ಎಂದಿದೆ.