ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗಿಗಳಿಗೆ ವೇತನ ಸಹಿತ ರಜೆ ನೀಡುವಂತೆ ಭಾರತೀಯ ಚುನಾವಣೆ ಆಯೋಗ ಮುಖ್ಯ ಕಾರ್ಯದರ್ಶಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.
ಚುನಾವಣೆ ಆಯೋಗ ಹೊರಡಿಸಿರುವ ಪತ್ರದಲ್ಲಿ, ಉದ್ಯೋಗಿಗಳಿಗೆ ರಜೆ ನೀಡುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯಿದೆ 1951 ಸೆಕ್ಷನ್ 135ಬಿ ಅನ್ನು ಉಲ್ಲೇಖಿಸಿದೆ. ಕಾಯಿದೆ ನಿಯಮದ ಪ್ರಕಾರ ಮತದಾನದ ದಿನ ಮೇ 10ರಂದು ಖಾಸಗಿ ಮತ್ತು ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆ ನೀಡಬೇಕೆಂದು ಆಯೋಗ ತಿಳಿಸಿದೆ.
ಸಾರ್ವತ್ರಿಕ ರಜೆ ಘೋಷಿಸಲು ನಿರ್ದೇಶನ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳಿಗೆ, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ, ಔದ್ಯಮಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ನಿರ್ದೇಶಿಸಿದೆ.
ಕಾಯಿದೆಯಡಿ ಮತದಾನದ ದಿನ ಉದ್ಯೋಗಿಗಳಿಗೆ ರಜೆ ನೀಡದೆ ಹೋದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬಹುದು ಎಂದು ಆಯೋಗ ಹೇಳಿದೆ. ಮೇ 10ಕ್ಕೆ ಮತದಾನ 13ರಂದು ಮತ ಎಣಿಕೆ ಭಾರತೀಯ ಚುನಾವಣೆ ಆಯೋಗವು ಮಾರ್ಚ್ 29ರಂದು ಚುನಾವಣೆ ದಿನಾಂಕ ಘೋಷಣೆ ಮಾಡಿದೆ.