ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನ ಸಭೆ ಚುನಾವಣೆಗೆ ದಿನಾಂಕ ಪ್ರಕಟಿಸಲಿದೆ. ಇಂದು ಬೆಳಿಗ್ಗೆ 11:30ಕ್ಕೆ ಪತ್ರಿಕಾಗೋಷ್ಠಿ ಆಯೋಜಿಸಲಾಗಿದ್ದು ಚುನಾವಣಾ ವೇಳಾಪಟ್ಟಿ ಪ್ರಟಿಸಲಾಗುತ್ತೆ. ದೆಹಲಿಯ ವಿಜ್ಞಾನ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಲಿದ್ದು ಕರ್ನಾಟಕ ಚುನಾವಣೆ ದಿನಾಂಕ ಘೋಷಣೆಯಾಗಲಿದೆ
ಮೇ ಮೊದಲ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು ಇಂದು ಚುನಾವಣಾ ದಿನಾಂಕ ಪ್ರಕಟವಾದ್ರೆ ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ