Tuesday, December 3, 2024
Homeಟಾಪ್ ನ್ಯೂಸ್ರಾಜ್ಯದಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ: ರಾಹುಲ್ ಗಾಂಧಿ

ರಾಜ್ಯದಲ್ಲಿ 10 ಲಕ್ಷ ಯುವಕರಿಗೆ ಉದ್ಯೋಗ: ರಾಹುಲ್ ಗಾಂಧಿ

ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿರುದ್ಯೋಗ ಸಮಸ್ಯೆ ಕುರಿತಂತೆ ಹಲವು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ್ದು, ರಾಜ್ಯ-ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ʼಭಾರತ್‌ ಜೋಡೋ ಯಾತ್ರೆ ಸಮಯದಲ್ಲಿ ಈ ಭಾಗದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಯುವಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಕಾರ್ಪೊರೇಷನ್ ನಲ್ಲಿ ಹಗರಣ ನಡೆದು ಶಾಸಕನ ಪುತ್ರ ಸಿಕ್ಕಿಬಿದ್ದಾಗ 8 ಕೋಟಿ ಸಿಗುತ್ತದೆ. ಸರ್ಕಾರ ಅವರ ರಕ್ಷಣೆ ಮಾಡುತ್ತದೆ. ಪಿಎಸ್ಐ ನೇಮಕಾತಿ, ಸಹಾಯಕ ಪ್ರಾದ್ಯಾಪಕ, ಸಹಾಯಕ ಇಂಜಿನಿಯರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಎಲ್ಲ ಆರೋಪ ಲಕ್ಷಾಂತರ ಯುವಕರ ದೂರಾಗಿದೆʼ ಎಂದು ರಾಹುಲ್‌ ಹೇಳಿದ್ದಾರೆ.  

 ʼಯುವಕರ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷ ಪ್ರತಿ ಪಧವಿಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವ ಯುವಕರಿಗೆ 1500 ರೂ.ಗಳನ್ನು 2 ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ನೀಡಲಿದೆ. ಇನ್ನು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಖಾಲಿ ಇರುವ 2.50 ಲಕ್ಷ ಉದ್ಯೋಗವನ್ನು ಭರ್ತಿ ಮಾಡಲಾಗುವುದು.ʼ ಎಂದು ಅವರು ತಿಳಿಸಿದ್ದಾರೆ.

ಯಾತ್ರೆ ಸಮಯದಲ್ಲಿ ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡಿದ್ದರು. ಅವರ ಕಷ್ಟಕ್ಕೆ ಪರಿಹಾರ ನೀಡಲು ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆ ಭರ್ತಿ ಮಾಡುತ್ತೇವೆ: ಖರ್ಗೆ ಭರವಸೆ

ಸಮಾವೇಶದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ಈ ಚುನಾವಣೆ ಕರ್ನಾಟಕ ರಾಜ್ಯಕ್ಕೆ ಬಹಳ ಮಹತ್ವವಾದ ಚುನಾವಣೆ. ಇಡೀ ದೇಶಕ್ಕೆ ಈ ಚುನಾವಣೆ ಸಂದೇಶ ನೀಡಲಿದೆ” ಎಂದಿದ್ದಾರೆ.

“ನಾನು ಎಐಸಿಸಿ ಅದ್ಯಕ್ಷನಾದ ನಂತರ ಬೆಳಗಾವಿ ಭೂಮಿಗೆ ಬಂದಿದ್ದೇನೆ. ಕಾಂಗ್ರೆಸ್ ಪಕ್ಷ ಇಲ್ಲಿನ 18 ಕ್ಷೇತ್ರಗಳಲ್ಲಿ 15-16 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಈ ಬಾರಿ ನಮ್ಮ ನಾಯಕರ ಒಗ್ಗಟ್ಟು ನೋಡಿದರೆ ಈ ಬಾರಿ 18ಕ್ಕೆ 18 ಕ್ಷೇತ್ರದಲ್ಲೂ ಗೆಲ್ಲುವ ವಿಶ್ವಾಸವಿದೆ” ಎಂದರು.

 ಪಕ್ಷ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಘೋಷಣೆ ನೀಡಲಾಗಿದೆ. ದೇಶದಲ್ಲಿ 50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಅದನ್ನು ತುಂಬುತ್ತಿಲ್ಲ. ಇವರು ಹೇಳಿದ 2 ಕೋಟಿ ಉದ್ಯೋಗ ಎಲ್ಲಿ ಹೋದವು ಗೊತ್ತಿಲ್ಲ. ರಾಜ್ಯದಲ್ಲಿ 2.50 ಲಕ್ಷ ಉದ್ಯೋಗ ಖಾಲಿ ಇದ್ದು, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಒಂದೂವರೆ ವರ್ಷಗಳಲ್ಲಿ ಎಲ್ಲಾ ಹುದ್ದೆ ತುಂಬುತ್ತೇವೆ ಎಂದು ಖರ್ಗೆ ಭರವಸೆ ನೀಡಿದ್ದಾರೆ.

ನಂತರ ಮಾತನಾಡಿದ ಸಿದ್ದರಾಮಯ್ಯ, “ಉದ್ಯೋಗ ನೀಡುತ್ತೇವೆ ಎಂದ ಮೋದಿ ಸರ್ಕಾರ ಇಂದು ಉದ್ಯೋಗ ಪಡೆಯಲು ಲಂಚ ಪಡೆದು ಉದ್ಯೋಗಾಕಾಂಕ್ಷಿಗಳ ಕತ್ತು ಹಿಸುಕುತ್ತಿದೆ. ಇಂಥ ಸರ್ಕಾರ ಇರಬೇಕಾ ಎಂದು ಯುವಕರು ಯೋಚಿಸಬೇಕು ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ಯುವಕರೇ ದೇಶದ ಹಾಗೂ ರಾಜ್ಯದ ಭವಿಷ್ಯ.. ಯುವಕರೇ ದೇಶದ ಭವಿಷ್ಯ.. ಈ ರಾಜ್ಯದ ಭವಿಷ್ಯ ಉಳಿಯಬೇಕಾದ್ರೆ ಬಿಜೆಪಿ ಕಿತ್ತೊಗೆದು ಕಾಂಗ್ರೆಸ್‌ಗೆ ಅಧಿಕಾರ ನೀಡಬೇಕು” ಎಂದು ಆಗ್ರಹಿಸಿದರು.

ಡಿಕೆ ಶಿವಕುಮಾರ್‌ ಮಾತನಾಡಿ, “ಕಾಂಗ್ರೆಸ್ ಪಕ್ಷದ ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಯೋಜನೆಯನ್ನು ಇದೇ ಭೂಮಿಯಲ್ಲಿ ಘೋಷಿಸಲಾಗಿತ್ತು. ಈ ಯೋಜನೆ ಮೂಲಕ ಪ್ರತಿ ಮನೆಗೆ ತಿಂಗಳಿಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. ಇದರಿಂದ ಪ್ರತಿ ತಿಂಗಳು 1500 ರೂ.ನಂತೆ ವರ್ಷಕ್ಕೆ 18 ಸಾವಿರ ಉಳಿತಾಯವಾಗಲಿದೆ. ಇನ್ನು ಎರಡನೇ ಗ್ಯಾರಂಟಿ ಯೋಜನೆಯಾಗಿ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ರೂ ಪ್ರೋತ್ಸಾಹ ಧನ ನೀಡಲಾಗುವುದು. ಆಮೂಲಕ ವರ್ಷಕ್ಕೆ 24 ಸಾವಿರ ನೀಡಲಾಗುವುದು. ಈ ಎರಡು ಯೋಜನೆಗಳಿಂದ ವರ್ಷಕ್ಕೆ 42 ಸಾವಿರದಂತೆ ಐದು ವರ್ಷಕ್ಕೆ 2.10 ಲಕ್ಷ ಹಣ ಉಳಿತಾಯವಾಗಲಿದೆ. ಇನ್ನು ಮೂರನೇ ಗ್ಯಾರೆಂಟಿ ಯೋಜನೆಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು” ಎಂದಿದ್ದಾರೆ.

ಹೆಚ್ಚಿನ ಸುದ್ದಿ

error: Content is protected !!