Sunday, July 7, 2024
Homeಕ್ರೀಡೆT20 WORLD CUP: ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌

T20 WORLD CUP: ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌

ವೆಸ್ಟ್‌ಇಂಡೀಸ್‌: 2024 ರ ಟಿ20 ವಿಶ್ವಕಪ್‌ನ (T20 World Cup) ಸೆಮಿಫೈನಲ್‌ನಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್‌ನಲ್ಲಿ ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡಿದೆ.

ವೆಸ್ಟ್‌ಇಂಡೀಸ್‌ನ ಗಯಾನದ ಪ್ರೋವಿಡೆನ್ಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೆಮಿ ಫೈನಲ್‌ ಪಂದ್ಯವು ಮಳೆಯಿಂದಾಗಿ ಒಂದು ಗಂಟೆ ತಡವಾಗಿ ಪ್ರಾರಂಭವಾಗಿದೆ. ಇಂದಿನ ಪಂದ್ಯದಲ್ಲಿ ಗೆದ್ದ ತಂಡವು ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಸೆಣೆಸಾಡಲಿದೆ. 2022ರಲ್ಲಿ ನಡೆದ ಟಿ20 ಪಂದ್ಯದ ಸೆಮಿಫೈನಲ್‌ನಲ್ಲಿ ಇಂಡಿಯಾ ಹಾಗೂ ಇಂಗ್ಲೆಂಡ್‌ ಮುಖಾಮುಖಿಯಾಗಿದ್ದವು. ಈ ವೇಳೆ ಇಂಗ್ಲೆಂಡ್‌ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಭಾರತ 2022ರ ಪಂದ್ಯದ ಸೋಲಿನ ಸೇಡನ್ನು ತೀರಿಸಿಕೊಳ್ಳುವ ತವಕದಲ್ಲಿದೆ.

ಭಾರತ ಪರ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್‌ ಕೀಪರ್‌), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.

ಇಂಗ್ಲೆಂಡ್‌ ಪರ:
ಜೋಸ್ ಬಟ್ಲರ್ (ನಾಯಕ ಮತ್ತು ವಿಕೆಟ್‌ ಕೀಪರ್‌), ಫಿಲ್ ಸಾಲ್ಟ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ಜೋರ್ಡಾನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ರೀಸ್ ಟೋಪ್ಲಿ.

ಹೆಚ್ಚಿನ ಸುದ್ದಿ