Sunday, July 7, 2024
Homeಟಾಪ್ ನ್ಯೂಸ್Fahad Fasil: ಖ್ಯಾತ ನಟ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು!

Fahad Fasil: ಖ್ಯಾತ ನಟ ಫಹಾದ್ ಫಾಸಿಲ್ ವಿರುದ್ಧ ದೂರು ದಾಖಲು!

ಕೇರಳ: ಮಲಯಾಳಂ ಸ್ಟಾರ್ ಫಹಾದ್ ಫಾಸಿಲ್ ವಿರುದ್ಧ ಮಾನವ ಹಕ್ಕುಗಳ ಆಯೋಗ ದೂರು ದಾಖಲಿಸಿಕೊಂಡಿದೆ.

ಫಹಾದ್ ಫಾಸಿಲ್ ನಿರ್ಮಾಣದ ಪೇಯ್ನ್ ಕಿಲಿ ಚಿತ್ರದ ಚಿತ್ರೀಕರಣ ಕೇರಳದ ಆಸ್ಪತ್ರೆಯಲ್ಲಿ ನಡೆದಿತ್ತು. ಆಗ ಚಿತ್ರತಂಡ ಅಲ್ಲಿದ್ದವರಿಗೆ ತೊಂದರೆ ಕೊಟ್ಟ ಕಾರಣ ಮಾನವ ಹಕ್ಕುಗಳ ಆಯೋಗ ಫಹಾದ್ ವಿರುದ್ಧ ದೂರು ದಾಖಲಿಸಿಕೊಂಡಿದೆ.

ಎರ್ನಾಕುಲಂನ ಅಂಗಮಾಲಿ ತಾಲೂಕು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಪೇಯ್ನ್ ಕಿಲಿ ಚಿತ್ರೀಕರಣ ನಡೆಯುತ್ತಿತ್ತು. ಆಗ ರೋಗಿಗಳಿಗೆ ತೊಂದರೆಯಾಗಿದೆ ಎಂದು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ದೂರಿನ ಕ್ರಮ ಕೈಗೊಂಡಿದೆ.

ಚಿತ್ರೀಕರಣದ ವೇಳೆ ನಟ- ನಟಿಯರು ಸೇರಿದಂತೆ ಸುಮಾರು 50 ಮಂದಿ ಇದ್ದರು. ತುರ್ತು ಚಿಕಿತ್ಸಾ ಕೊಠಡಿಯನ್ನೂ ನಿರ್ಲಕ್ಷಿಸಿ ಶೂಟಿಂಗ್ ವೇಳೆ ಗಲಾಟೆ ನಡೆದಿದೆ. ದೊಡ್ಡ ದೊಡ್ಡ ಲೈಟ್ ಗಳನ್ನು ಹಾಕಿ, ತುರ್ತು ಚಿಕಿತ್ಸಾ ಕೊಠಡಿಯಲ್ಲಿ ಕೆಲವು ನಿರ್ಬಂಧಗಳನ್ನು ಹಾಕಿದ್ದರು. ಅಲ್ಲದೆ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಿಗೆ ತೊಂದರೆ ಕೊಟ್ಟಿದ್ದಾರೆ ಎಂದು ದೂರಿನಲ್ಲಿ ಹೇಳಲಾಗುತ್ತಿದೆ. ವೈದ್ಯರು ಚಿಕಿತ್ಸೆ ಮುಂದುವರಿಸಿರುವಾಗಲೇ ಚಿತ್ರದ ಶೂಟಿಂಗ್ ನಡೆಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸ್ವಯಂ ಪ್ರಕರಣವನ್ನು ದಾಖಲಿಸಿಕೊಂಡ ಆಯೋಗದ ಸದಸ್ಯೆ ವಿ.ಕೆ. ಬೀನಾಕುಮಾರಿ, ಏಳು ದಿನಗಳಲ್ಲಿ ವಿವರಣೆ ವರದಿಯನ್ನು ಸಲ್ಲಿಸುವಂತೆ ಎರ್ನಾಕುಲಂ ಜಿಲ್ಲಾ ವೈದ್ಯಾಧಿಕಾರಿ ಮತ್ತು ಅಂಗಮಾಲಿ ತಾಲೂಕು ಆಸ್ಪತ್ರೆ ಅಧೀಕ್ಷಕರಿಗೆ ಸೂಚನೆ ನೀಡಿದ್ದಾರೆ.

ಮಲಯಾಳಂ ನಟ ಫಹಾದ್ ಫಾಸಿಲ್ ತಮ್ಮ ಸಿನಿಮಾಗಳ ಮೂಲಕ ಯಶಸ್ಸಿನಲ್ಲಿ ಉತ್ತುಂಗದಲ್ಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅವರು ನಟ ಮತ್ತು ನಿರ್ಮಾಪಕರಾಗಿ ಗಮನ ಸೆಳೆದಿದ್ದಾರೆ. ಅಲ್ಲದೇ ಪುಷ್ಪಾ ಭಾಗ ಒಂದರಲ್ಲಿ ಅವರ ನಟನೆ ಗಮನ ಸೆಳೆದಿತ್ತು. ಇನ್ನು ಪುಷ್ಪಾ ಭಾಗ ಎರಡರಲ್ಲಿ ಅವರ ಪಾತ್ರದ ಬಗ್ಗೆ ಕುತೂಹಲ ಹೆಚ್ಚಿದೆ.

ಹೆಚ್ಚಿನ ಸುದ್ದಿ