ಹಾಸನ: ಒಂದೇ ಕುಟುಂಬದ ಇಬ್ಬರು ರಾಜಕಾರಣಿಗಳು ಬೇರೆ ಬೇರೆ ಪಕ್ಷಗಳಿಂದ ಈ ಬಾರಿ ಚುನಾವಣೆಯಲ್ಲಿ ಕಣಕ್ಕಿಳಿಯಲಿದ್ದಾರೆ.
ಹಾಸನದ ಅರಕಲಗೂಡು ಮಂಜುನಾಥ್ ಜೆಡಸ್‌ನಿಂದ ಸ್ಪರ್ಧೆ ಮಾಡುತ್ತಿದ್ರೆ, ಮಂಜು ಪುತ್ರ ಮಂಥರ್ ಗೌಡ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ
ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದ ಎ.ಮಂಜು ಕಳೆದ ಬಾರಿ ಬಿಜೆಪಿ ಸೇರ್ಪಡೆಗೊಂಡಿದ್ರು.. ಕೆಲ ದಿನಗಳ ಹಿಂದಷ್ಟೇ ಜೆಡಿಎಸ್ ಪಕ್ಷ ಸೇರಿರುವ ಮಂಜು ಅರಕಲಗೂಡು ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆದ್ರೆ ಪುತ್ರ ಮಂಥರ್‌ಗೌಡ ಕಾಂಗ್ರೆಸ್ ಪಕ್ಷದಿಂದ ಮಡಿಕೇರಿ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆ ಮಾಡಲಿದ್ದಾರೆ. ಇದೀಗ ಎ.ಮಂಜು ಕುಟುಂಬದಲ್ಲಿ ಮನೆಯೊಂದು ಪಕ್ಷ ಎರಡು ಎಂಬಂತಾಗಿದೆ