ಕೋಲಾರ: ಮಾನಸಿಕ ಸ್ಥಿಮಿತವಿಲ್ಲದ ತಂದೆಯೊಬ್ಬ ಮಗನನ್ನೇ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 9 ವರ್ಷದ ಭುವನ್ ಮೃತ ದುರ್ದೈವಿ. ತಂದೆ ಬಾಲಸುಬ್ರಹ್ಮಣ್ಯಂ ಕೊಲೆಗೈದ ಆರೋಪಿಯಾಗಿದ್ದು, ಇಲ್ಲಿನ ನಂಗಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕೆಲ ವರ್ಷಗಳ ಹಿಂದೆ ಆರೋಪಿ ಬಾಲಸುಬ್ರಹ್ಮಣ್ಯಂ ಈ ಹಿಂದೆ ಪತ್ನಿಯನ್ನು ಕೊಂದು ಜೈಲಿಗೆ ಹೋಗಿ ಬಂದಿದ್ದನು. ಈಗ ಚಾಕುವಿನಿಂದ ಇರಿದು ಸ್ವಂತ ಮಗನನ್ನೇ ಕೊಲೆ ಮಾಡಿರುವ ಆರೋಪಿಯನ್ನು ನಂಗಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.