Wednesday, December 4, 2024
Homeಟಾಪ್ ನ್ಯೂಸ್Jds Vs Congress : ಚಂದ್ರಶೇಖರ ಶ್ರೀ ವಿರುದ್ಧ FIR, ಸಿಎಂ-ಕಾಂಗ್ರೆಸ್​​​ ಒಕ್ಕಲಿಗರ ವಿರೋಧಿ ಎಂದ...

Jds Vs Congress : ಚಂದ್ರಶೇಖರ ಶ್ರೀ ವಿರುದ್ಧ FIR, ಸಿಎಂ-ಕಾಂಗ್ರೆಸ್​​​ ಒಕ್ಕಲಿಗರ ವಿರೋಧಿ ಎಂದ ದಳ!

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಎಂಬ ಆರೋಪದಡಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿಯ ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಠಾಣೆಗೆ ಹಾಜರಾಗುವಂತೆ ಪೊಲೀಸರಿಂದ ನೋಟಿಸ್ ನೀಡಲಾಗಿದೆ.

ಈ ಕುರಿತು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿರುವ ಜೆಡಿಎಸ್​, ಕ್ಷಮೆಯಾಚಿಸಿದ ಸ್ವಾಮೀಜಿ ಮೇಲೆ ಎಫ್‌ಐಆರ್‌ ಹಾಕಿರುವುದು ಖಂಡನೀಯ.  ಚಂದ್ರಶೇಖರ ಸ್ವಾಮೀಜಿಯವರು ತಮ್ಮ ಹೇಳಿಕೆ ಹಿಂಪಡೆದಿದ್ದಾರೆ. ಆದರೂ ಅವರ ವಿರುದ್ಧ ದುರುದ್ದೇಶಪೂರ್ವಕವಾಗಿ ಕೇಸು ದಾಖಲಿಸಿ ಎಫ್‌ಐಆರ್‌ ಹಾಕಿರುವುದು ಖಂಡಿತಾ ತಪ್ಪು. ತಮ್ಮ ಹೇಳಿಕೆಯಿಂದ ಬೇಸರವಾಗಿದ್ದರೆ ವಿಷಾದವಿದೆ ಎಂದು ಪೂಜ್ಯರು ಹೇಳಿದ್ದಾರೆ. ಈ ವಿಚಾರವನ್ನು ಇಲ್ಲಿಗೇ ಕೈಬಿಡಿ ಎಂದು ಕೋರಿದ್ದಾರೆ. ಆದರೆ, ಒಕ್ಕಲಿಗ ವಿರೋಧಿ  ಸಿಎಂ ಸಿದ್ದರಾಮಯ್ಯ ಅವರು ಮತ್ತು ಕಾಂಗ್ರೆಸ್​​ ಸರ್ಕಾರ ಸರ್ಕಾರ, ಸಮುದಾಯದ ಸ್ವಾಮೀಜಿಗಳ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.


ಈ ಸರ್ಕಾರ ಒಕ್ಕಲಿಗರ ವಿರುದ್ಧ ವಿಷ ಕಾರುತ್ತಿರುವುದು ಇದೇ ಮೊದಲಲ್ಲ. ಒಕ್ಕಲಿಗ ವಿರೋಧಿ ಕಾಂಗ್ರೆಸ್‌ ನಡೆಗೆ ನಮ್ಮ ಧಿಕ್ಕರವಿದೆ. ಶ್ರೀಗಳ ಮೇಲೆ ದಾಖಲಿಸಿರುವ ಎಫ್‌ಐಆರ್‌ ವಿಚಾರವಾಗಿ ಕಾಂಗ್ರೆಸ್‌ನಲ್ಲಿರುವ ಒಕ್ಕಲಿಗ ಮಂತ್ರಿಗಳು ಮತ್ತು ಶಾಸಕರು ಜಾಣಮೌನಕ್ಕೆ ಶರಣಾಗಿರುವುದು ನಾಚಿಕೆಗೇಡು. ಪ್ರತಿಯೊಂದಕ್ಕೂ ನಾಲಿಗೆ ಹರಿಯಬಿಡುವ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಚೆಲುವರಾಯ ಸ್ವಾಮಿ, ಕೃಷ್ಣಬೈರೇಗೌಡ ಅವರು ಮುಗುಮ್ಮಾಗಿ ಮೌನಕ್ಕೆ ಒಳಗಾಗಿ ಸಮುದಾಯ ಶ್ರೀಗಳನ್ನು ಅಪಮಾನಿಸುತ್ತಿದ್ದರೂ ಸುಮ್ಮನಿರುವುದು ಅಕ್ಷಮ್ಯ. ಜಾಣಮೌನ ಕುಲದ್ರೋಹಿಗಳ ಗುಣ. ಇಂಥವರಿಗೆ ಮುಂದಿನ ದಿನಗಳಲ್ಲಿ ಒಕ್ಕಲಿಗ ಕುಲಭಾಂದವರು ತಕ್ಕಪಾಠ ಕಲಿಸುವುದು ನಿಶ್ಚಿತ ಎಂದು ಜೆಡಿಎಸ್​​​ ಕಿಡಿಕಾರಿದೆ.

ಹೆಚ್ಚಿನ ಸುದ್ದಿ

error: Content is protected !!