Monday, April 21, 2025
Homeಟಾಪ್ ನ್ಯೂಸ್ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್ ವೈ

ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಬಿಎಸ್ ವೈ

ಬೆಂಗಳೂರು: ಇಂದು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಟಿಕೆಟ್ ವಿಚಾರವಾಗಿ ದೆಹಲಿಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ನಾಯಕರು ಚರ್ಚೆ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಾಜಿ ಸಿಎಂ ಯಡಿಯೂಪ್ಪ, ಸಂಜೆ ಒಳಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬರಲಿದೆ. ಇವತ್ತು ಮತ್ತೊಂದು ಸುತ್ತಿನ ಸಭೆ ನಡೆಯಲಿದೆ. ಸಭೆ ಬಳಿಕ ತೀರ್ಮಾನ ಮಾಡಿ, 170-180 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ಎರಡು ದಿನ ದಎಹಲಿಯಲ್ಲಿ ನಡೆದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು, ಸಿ.ಟಿ ರವಿ ಸೇರಿ ಹಲವಾರು ಈ ಸಭೆ ಭಾಗಿಯಾಗಿದ್ದರು.

ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಳಿಕ ಹಲವು ಟಿಕೆಟ್ ಆಕಾಂಶಿಗಳು ಅಸಮಧಾನ ಹೊರಹಾಕಿದ್ದರು. ಈ ನಡುವೆ, ವಿ.ಸೋಮಣ್ಣ, ನನಗೆ ಟಿಕೆಟ್ ಬೇಡ ಪುತ್ರನಿಗೆ ಟಿಕೆಟ್ ನೀಡುವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇನೆ. ಈ ಬಗ್ಗೆ ಪಕ್ಷ ತೀರ್ಮಾನ ಮಾಡೆಲಿದೆ ಎಂದು ಹೇಳಿದ್ದರು. ಇದೀಗ ಬಿಜೆಪಿ ಪಟ್ಟಿ ಕುರಿತು ತೀವ್ರ ಕುತೂಹಲ ಮೂಡಿದ್ದು, ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಕಾದುನೋಡಬೇಕಿದೆ.

ಹೆಚ್ಚಿನ ಸುದ್ದಿ

error: Content is protected !!